ಹಾವೇರಿಯಲ್ಲಿ ಅನುಮಾನಾಸ್ಪದ ಹ್ಯಾಂಡ್​ ಗ್ರೆನೇಡ್ ಪತ್ತೆ..!


ಹಾವೇರಿ: ಇಲ್ಲಿನ ನೇತಾಜಿ ನಗರದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಹ್ಯಾಂಡ್ ಗ್ರೆನೇಡನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಲಾಗಿದೆ.

ನಗರದ ಹರೀಶ್​ ಮೆಸ್​ ಬಳಿ ಅನುಮಾನಾಸ್ಪದ ರೀತಿಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿ ಸಾಕಷ್ಟು ಆತಂಕ ಸೃಷ್ಟಿಸಿತ್ತು. ವಿಷಯ ತಿಳಿದು ಹುಬ್ಬಳ್ಳಿಯ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಗ್ರೆನೇಡ್​​ನ್ನು ವಶಪಡಿಸಿಕೊಂಡಿತ್ತು. ಸದ್ಯ ವಶಪಡಿಸಿಕೊಂಡ ಗ್ರೆನೇಡ್ಅ​​ನ್ನು ದೂರದ ನಿರ್ಜನ ಪ್ರದೇಶದಲ್ಲಿ ಸ್ಫೋಟಿಸಿ ನಿಷ್ಕ್ರಿಯಗೊಳಿಸಿದ್ದಾರೆ.

ಆ ಮೂಲಕ ನಗರದ ನಿವಾಸಿಗಳಲ್ಲಿ ಮನೆ ಮಾಡಿದ್ದ ಆತಂಕವನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೂರ ಮಾಡಿದ್ದಾರೆ.

News First Live Kannada


Leave a Reply

Your email address will not be published. Required fields are marked *