ಹಾವೇರಿ: ಹಾಲು ಕುಡಿದು 12 ವಿದ್ಯಾರ್ಥಿಗಳು ಅಸ್ವಸ್ಥ | 12 students sick after drinking milk in Haveri


ಹಾಲು ಕುಡಿದು 12 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿಗ್ಗಾಂವಿ ತಾಲೂಕಿನ ದುಂಡಶಿ ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಹಾಲು ಕುಡಿದು 12 ವಿದ್ಯಾರ್ಥಿಗಳು ಅಸ್ವಸ್ಥ

ಅಸ್ವಸ್ಥಗೊಂಡಿರುವ ಮಕ್ಕಳು

ಹಾವೇರಿ: ಹಾಲು ಕುಡಿದು 12 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡಿರುವ ಘಟನೆ ಶಿಗ್ಗಾಂವಿ (Shiggavi) ತಾಲೂಕಿನ ದುಂಡಶಿ ಗ್ರಾಮದಲ್ಲಿ ನಡೆದಿದೆ. ವಿವೇಕಾನಂದ ಪ್ರೌಢಶಾಲೆಯಲ್ಲಿ ಇಂದು ಮಧ್ಯಾಹ್ನ ಊಟದ ಜೊತೆ ಹಾಲು (Milk) ಪೂರೈಸಲಾಗಿತ್ತು. ವಿದ್ಯಾರ್ಥಿಗಳು ಹಾಲು ಸೇವಿಸಿ ಅಸ್ವಸ್ಥರಾಗಿದ್ದಾರೆ. 12 ವಿದ್ಯಾರ್ಥಿಗಳಿಗೆ ತಲೆ ನೋವು, ಸುಸ್ತಿನಿಂದ ಬಳಲುತ್ತಿದ್ದು, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಐವರು ವಿದ್ಯಾರ್ಥಿಗಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಮಕ್ಕಳಿಗೆ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ

TV9 Kannada


Leave a Reply

Your email address will not be published.