ಹಾಸನ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಲಾಕ್‍ಡೌನ್ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಸೋಮವಾರ, ಬುಧವಾರ, ಶುಕ್ರವಾರ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ವಹಿವಾಟು, ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ವಾರದ ಉಳಿದ ನಾಲ್ಕುದಿನ ಸಂಪೂರ್ಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಜೂನ್ 5 ರಿಂದ 12ರ ವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶಿಸಿದ್ದಾರೆ.

ಬ್ಯಾಂಕ್ ಹಾಗೂ ಅಂಚೆ ಕಚೇರಿಗೂ ಮೂರು ದಿನ ಸಾರ್ವಜನಿಕ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ದೇವಾಲಯ ಹಾಗೂ ಪೂಜಾ ಸ್ಥಳಗಳಿಗೆ ಭಕ್ತರಿಗೆ ಅವಕಾಶ ನೀಡದೇ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮದುವೆಗೆ ಕೇವಲ 40 ಜನರಿಗೆ ಮಾತ್ರ ಅವಕಾಶ, ಟ್ಯಾಕ್ಸಿ ಮತ್ತು ಆಟೋದಲ್ಲಿ ಇಬ್ಬರು ಓಡಾಡಲು ಅವಕಾಶ ಕಲ್ಪಿಸಿ, ಹಾಸನ ಜಿಲ್ಲೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

The post ಹಾಸನದಲ್ಲಿ ಜುಲೈ 12ರವರೆಗೆ ಲಾಕ್‍ಡೌನ್ ವಿಸ್ತರಣೆ appeared first on Public TV.

Source: publictv.in

Source link