ಹಿಂದುಳಿದ ವರ್ಗದ ಓಟ್ ಬ್ಯಾಂಕ್ ಮೇಲೆ ಬಿಜೆಪಿ ಕಣ್ಣು, ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಕಮಲ ಪಡೆ ಸಜ್ಜು – Karnataka BJP OBC Rally In Kalaburagi On Oct 30 ahead-2023 assembly Election


ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದ್ದು ಬೇರೆ-ಬೇರೆ ರೀತಿಯಾಗಿ ಸಮಾವೇಶಗಳನ್ನು ನಡೆಸಿ, ಜಾತಿಗಳ ಓಲೈಕೆಗೆ ತಯಾರಿ ನಡೆಸಿವೆ. ಇದೀಗ ಬಿಜೆಪಿ, ಹಿಂದುಳಿದ ವರ್ಗಗಳ ಮತ ಬ್ಯಾಂಕ್ ನ್ನು ಗಟ್ಟಿ ಮಾಡಿಕೊಳ್ಳಲು ಮುಂದಾಗಿದೆ.

ಹಿಂದುಳಿದ ವರ್ಗದ ಓಟ್ ಬ್ಯಾಂಕ್ ಮೇಲೆ ಬಿಜೆಪಿ ಕಣ್ಣು, ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಕಮಲ ಪಡೆ ಸಜ್ಜು

Arun Singh: ಕೋರ್​ ಕಮಿಟಿ ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ದ ಉಸ್ತುವಾರಿ ಅರುಣ್ ಸಿಂಗ್ ಫುಲ್ ಗರಂ!

ಕಲಬುರಗಿ: ಕರ್ನಾಟಕ ವಿಧಾನಸಭೆಗೆ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಕೀಯ ಪಕ್ಷಗಳು ಜಾತಿಗಳ ಓಲೈಕೆಗೆ ಮುಂದಾಗಿವೆ. ಇದೀಗ ಬಿಜೆಪಿ ನಾಯಕರು, ಓಬಿಸಿ ಸಮುದಾಯದ ಮೇಲೆ ಕಣ್ಣು ಹಾಕಿದ್ದು, ಓಬಿಸಿ ಓಟ್ ಬ್ಯಾಂಕ್ ಪಡೆಯಲು ಕಸರತ್ತು ಆರಂಭಿಸಿದ್ದಾರೆ. ಜೊತೆಗೆ ಹಿಂದುಳಿದ ವರ್ಗದ ನಾಯಕರೆನಿಸಿಕೊಂಡಿರುವ ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.

ಹೌದು…ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಓಬಿಸಿ ಸಮಾವೇಶ ಆಯೋಜಿಸಿದ್ದು, .ಇದೇ ಅಕ್ಟೋಬರ್ 30 ರಂದು ಕಲಬುರಗಿ ನಗರದ ಹೊರವಲಯದಲ್ಲಿ ರಾಜ್ಯ ಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ. ಹಿಂದುಳಿದ ಜಾತಿಯ ಮತಗಳು ಬಿಜೆಪಿಗೆ ಬರುವಂತೆ ಮಾಡುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸುತ್ತಿದೆ.

SC ST ಮೀಸಲಾತಿ ಹೆಚ್ಚಳದ ಕ್ರೆಡಿಟ್ ತಗೆದುಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್..!

ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಸೇರಿದಂತೆ ರಾಜ್ಯ ಮತ್ತು ಕೇಂದ್ರದ ಅನೇಕ ಸಚಿವರು, ಬಿಜೆಪಿ ಮುಖಂಡರು ಸಮಾವೇಶದಲ್ಲಿ ಬಾಗಿಯಾಗಲಿದ್ದಾರೆ. ಸುಮಾರು ಐದು ಲಕ್ಷ ಜನರನ್ನು ಸೇರಿಸಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಮಾಡಲು ಬಿಜೆಪಿ ನಾಯಕರು ಎಲ್ಲಾ ರೀತಿಯ ಸಿದ್ದತೆ ನಡೆಸಿದ್ದಾರೆ.

ಅದಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಸೇರಿದಂತೆ ಅನೇಕ ಕೆಲಸಗಳು ಭರದಿಂದ ಸಾಗಿವೆ. ಜೊತೆಗೆ ರಾಜ್ಯ ಹಿಂದುಳಿದ ವರ್ಗಗಳಲ್ಲಿ ಬರುವ ಇನ್ನೂರು ಜಾತಿಯ ಪ್ರಮುಖ ಮುಖಂಡರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದ ಮೂಲಕ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ, ಹಿಂದುಳಿದ ವರ್ಗಗಳ ಪರವಾಗಿ ಇದೆ ಅನ್ನೋದನ್ನೋ ತೋರಿಸುವ ಉದ್ದೇಶವನ್ನು ಹೊಂದಿದೆ. ಹಿಂದುಳಿದ ವರ್ಗಗಳಿಗೆ ಸರ್ಕಾರ ಮಾಡಿರುವ ಕೆಲಸಗಳ ಪಟ್ಟಿಯನ್ನು ತೋರಿಸುವ ಕೆಲಸವನ್ನು ನಾಯಕರು ಮಾಡಲು ಮುಂದಾಗಿದ್ದಾರೆ. ಇನ್ನು ಹಿಂದುಳಿದ ವರ್ಗಗಳ ಹೆಚ್ಚಿನ ಜನರು ಇದೀಗ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಹಿಂದುಳಿದ ವರ್ಗಗಳ ಜನರನ್ನು ಓಲೈಸುವ ಮೂಲಕ, ಸಿದ್ದರಾಮಯ್ಯಗೆ ಟಕ್ಕರ್ ನೀಡುವ ಉದ್ದೇಶವನ್ನು ಬಿಜೆಪಿ ನಾಯಕರು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನರು ಬರಲಿದ್ದು, ಅವರೆಲ್ಲರಿಗೆ ಬೇಕಾದ ವ್ಯವಸ್ಥೆಯನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ.

ಜಾತಿಗಳ ಓಲೈಕೆಗಾಗಿ ಮೂರು ಪಕ್ಷಗಳು ಹತ್ತಾರು ರೀತಿಯ ಕಸರತ್ತು ಆರಂಭಿಸಿವೆ. ಆದ್ರೆ ಯಾವ ಜಾತಿಯ ಜನರು, ಯಾರಿಗೆ ಜೈ ಅಂತಾರೆ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

 ವರದಿ: ಸಂಜಯ್, ಟಿವಿ9 ಕಲಬುರಗಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.