ಹಿಜಾಬ್​​ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ; ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನ | Karnataka Hijab case Referred to CJ of Karnataka High Court CJ will Decide to form on larger Bench


ಹಿಜಾಬ್​​ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ; ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನ

ಕರ್ನಾಟಕ ಹೈಕೋರ್ಟ್

ಬೆಂಗಳೂರು: ಹಿಜಾಬ್​​ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನಿಸಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್​​ಗೆ ನ್ಯಾಯಮೂರ್ತಿಗಳ ನಿರ್ದೇಶನ ನೀಡಿದ್ದಾರೆ. ಅರ್ಜಿದಾರರು ಮುಂದಿನ ವಿಚಾರಣೆ ವೇಳೆ ಮನವಿ ಸಲ್ಲಿಸಬಹುದು. ಮಧ್ಯಂತರ ಆದೇಶದ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published.