ಹಿಜಾಬ್-ಕೇಸರಿ ಶಾಲು ಗಲಾಟೆ; ರಾಜ್ಯದ ಯಾವ್ಯಾವ ಕಾಲೇಜಿನಲ್ಲಿ ಏನೆಲ್ಲಾ ಆಯ್ತು..? ಕಂಪ್ಲೀಟ್ ಡಿಟೇಲ್ಸ್


ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಸಾಲು ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ಜೋರಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಗದಗ, ಕಲಬುರಗಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

MGM ಕಾಲೇಜಿನಲ್ಲಿ ಹೈಡ್ರಾಮಾ
ಉಡುಪಿಯ ಮಣಿಪಾಲ್ ಬಳಿಯಿರುವ ಎಂಜಿಎಂ ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿರುವ ಕಾರಣಕ್ಕೆ ಅವರನ್ನ ಕಾಲೇಜು ಆಡಳಿತ ಮಂಡಳಿ ತಡೆಯಿತು. ಈ ವೇಳೆ ಹಿಜಾಬ್ ಪರ ಹೊಂದಿರೋ ವಿದ್ಯಾರ್ಥಿನಿಯರ ಗುಂಪು ಪ್ರತಿಭಟನೆಗೆ ಮುಂದಾಯ್ತು. ಅದನ್ನ ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ಪ್ರತಿಭಟಿಸಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ಎಂಟ್ರಿ ನೀಡಿ ಪರಿಸ್ಥಿತಿಯನ್ನ ಹತೋಟಿಗೆ ತಂದರು. ಸದ್ಯ ಅಲ್ಲಿನ ಪರಿಸ್ಥಿತಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಸದ್ಯ ಶಾಲಾ ಆಡಳಿತ ಮಂಡಳಿ ರಜೆಯನ್ನ ಘೋಷಣೆ ಮಾಡಿದೆ.

ಧ್ವಜ ಕಂಬಕ್ಕೆ ಕೇಸರಿ ಬಾವುಟ ಕಟ್ಟಿದ ವಿದ್ಯಾರ್ಥಿಗಳು
ಶಿವಮಗೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರಕ್ಕೆ ಕಲ್ಲು ತೂರಾಟ ನಡೆದಿದೆ. ಹಿಜಾಬ್ ವಿರೋಧಿಸಿ ಕೆಲವು ವಿದ್ಯಾರ್ಥಿಗಳು, ಪ್ರತಿಭಟನೆ ನಡೆಸಿದರು. ಮಾತ್ರವಲ್ಲ ಕೆಲವು ವಿದ್ಯಾರ್ಥಿಗಳ ಗುಂಪು, ಶಾಲೆಯ ಧ್ವಜದ ಕಂಬ ಹತ್ತಿ ಕೇಸರಿ ಬಾವುಟ ಹಾರಿಸುವ ಪ್ರಯತ್ನ ಮಾಡಿದರು. ಇನ್ನೊಂದು ಕಡೆ ಕಲ್ಲು ತೂರಾಟ ಕೂಡ ನಡೆಯಿತು. ಆಗ ಸ್ಥಳಕ್ಕೆ ಎಸ್ಪಿ ಲಕ್ಷ್ಮೀ ಪ್ರಸಾದ್ ಆಗಮಿಸಿ, ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದರು. ಇನ್ನು ವಿದ್ಯಾರ್ಥಿಗಳನ್ನ ಚದುರಿಸಲು ಲಘು ಲಾಠಿ ಪ್ರಹಾರ ಕೂಡ ಮಾಡಲಾಯಿತು.

ದಾವಣಗೆರೆಯಲ್ಲೂ ಗಲಾಟೆ
ದಾವಣಗೆರೆಯ ಬಿ.ಎಸ್.ಚನ್ನಬಸಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೆಲವು ವಿದ್ಯಾರ್ಥಿನಿಯರು ಹಾಗೂ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ಈ ವೇಳೆ ಉಪನ್ಯಾಸಕರು ಕೇಸರಿ ಶಾಲು ತೆಗೆದಿಟ್ಟು ಬರವಂತೆ ಮನವಿ ಮಾಡಿಕೊಂಡರು. ಆಗ ವಿದ್ಯಾರ್ಥಿಗಳು ಹಿಜಾಬ್ ತೆಗೆದರೆ ಮಾತ್ರ ನಾವು ಕೇಸರಿ ಶಾಲು ತೆಗೆಯುತ್ತೇವೆ ಎಂದು ವಾಗ್ವಾದಕ್ಕೆ ಇಳಿದ ಪ್ರಸಂಗ ನಡೆಯಿತು.

ಕಾಲೇಜಿನಿಂದ ಹೊರ ಹಾಕಿದ್ದಕ್ಕೆ ಆಕ್ರೋಶ
ಗದಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದ ಕೆಲವು ವಿದ್ಯಾರ್ಥಿನಿಯರು, ಪ್ರಿನ್ಸಿಪಲ್ ಪ್ರಕಾಶ್ ಹೊಸಮನಿ ಅವ್ರಿಗೆ ಮುತ್ತಿಗೆ ಹಾಕಿದರು. ಯಾವ ಆದೇಶ ಹಿನ್ನೆಲೆಯಲ್ಲಿ ನಮ್ಮನ್ನು ಕಾಲೇಜ್​ನಿಂದ ಹೊರಹಾಕಿದ್ದೀರಿ. ಸರ್ಕಾರದ ಆದೇಶ ಇದ್ದರೆ ತೋರಿಸಿ ಎಂದು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಬಗುವಿನ ವಾತಾವರಣ ನಿರ್ಮಾಣ ಉಂಟಾದ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಲಬುರಗಿಯಲ್ಲೂ ಹಿಜಾಬ್ ಗಲಾಟೆ
ಕಲಬುರಗಿಯ ಮಣ್ಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿನಲ್ಲೂ ಗಲಾಟೆ ನಡೆದಿದೆ. ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿಕೊಂಡು ಬಂದಿದ್ದರು. ಸರ್ಕಾರದ ಆದೇಶ ಉಲ್ಲಂಘಿಸಿ ಹಿಜಾಬ್, ಕೇಸರಿ ಶಾಲು ಹಾಕಿಕೊಂಡು ನೂರಾರು ವಿದ್ಯಾರ್ಥಿಗಳು ಬಂದಿದ್ದರು. ಈ ವೇಳೆ ವಿದ್ಯಾರ್ಥಿಗಳನ್ನ ಕಾಲೇಜು ಸಿಬ್ಬಂದಿ ತಡೆದಿದ್ದಾರೆ.

ಕಾಂಪೌಂಡ್ ಹಾರಿ ಕ್ಯಾಂಪಸ್​ಗೆ ನುಗ್ಗಿದ ವಿದ್ಯಾರ್ಥಿಗಳು
ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಉಂಟಾಗಿತ್ತು. ಬನಹಟ್ಟಿ ಸರ್ಕಾರಿ ಪಿಯು ಕಾಲೇಜು ಮುಂದೆ ನೂರಾರು ವಿದ್ಯಾರ್ಥಿನಿಯರು ಧರಣಿ ನಡೆಸಿದರು. ಮತ್ತೊಂದು ಕಡೆ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳೂ ಪ್ರತಿಭಟನೆ ನಡೆಸಿದರು. ಆಗ ಕೆಲವು ವಿದ್ಯಾರ್ಥಿಗಳು ಕಾಂಪೌಂಡ್​​ ಹಾರಿ ತರಗತಿಗೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳನ್ನ ಪೊಲೀಸರು ಚದುರಿಸಲು ಪ್ರಯತ್ನಿಸಿದರು. ಆಗ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಮಂಡ್ಯದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ರೆ, ಮತ್ತೊಂದು ಕಡೆ ಹಿಜಾಬ್ ಧರಿಸಿ ಅಲ್ಲಾವು ಅಕ್ಬರ್​ ಎಂದು ಜೋರಾಗಿ ಕೂಗಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಕೊಡಗು ಜಿಲ್ಲೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿಯೂ ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಭೌತಿಕ ತರಭೇತಿಯನ್ನ ರದ್ದು ಮಾಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ನಷ್ಟ ಆಗಬಾರದು ಅಂತಾ ಆನ್​​ಲೈನ್ ಮೂಲಕ ಪಾಠದ ಮೊರೆ ಹೋಗಲಾಗಿದೆ. ಹೀಗಿದ್ದೂ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಪ್ರವೇಶಿಸಲು ಪ್ರಯತ್ನಿಸಿದ ಘಟನೆ ನಡೆಯಿತು.

ಹಾಸನದಲ್ಲಿ ಏನಾಯ್ತು..? 
ಹಾಸನದಲ್ಲಿ ಕಾಲೇಜು ಒಂದರಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನ ಉಪನ್ಯಾಸಕರು ತಡೆದರು. ಇನ್ನು ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡ ಬಂದಿದ್ದರು. ಅವರನ್ನೂ ಕೂಡ ಉಪನ್ಯಾಸಕರು ತಡೆದು ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಬಜರಂಗಿ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಆಗಮಿಸುತ್ತಿದ್ದಂತೆ ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿಗಳು ಹೊರನಡೆದಿದ್ದಾರೆ.

ಹಾಸನದಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

ಚಿಕ್ಕಮಗಳೂರಿನ ಐ.ಡಿ.ಎಸ್.ಜಿ.ಕಾಲೇಜಿನಲ್ಲಿ ಯೂನಿಫಾರಂ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶಕ್ಕೆ ನಿರಾಕರಣೆ ಮಾಡಲಾಯಿತು. ಕೆಲವು ಕೇಸರಿ ಶಾಲು ಧರಿಸಿ ಕಾಂಪೌಂಡ್ ಹಾರಿ ಕ್ಯಾಂಪಸ್​ಗೆ ವಿದ್ಯಾರ್ಥಿಗಳು ನುಗ್ಗಿದರು. ನಂತರ ಪ್ರಾಂಶುಪಾಲರು ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಕಾಲೇಜಿನಲ್ಲಿ ಗಲಾಟೆ

News First Live Kannada


Leave a Reply

Your email address will not be published.