ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಕೋರಿದ ರೇಷಂ, ಆಲಿಯಾ: ಉಡುಪಿ ಕಾಲೇಜಿನಲ್ಲಿ ಚರ್ಚೆ | PU Examination Hijab Controversy Resham Alia Requests for Permission to Write Exam with Hijab


ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಕೋರಿದ ರೇಷಂ, ಆಲಿಯಾ: ಉಡುಪಿ ಕಾಲೇಜಿನಲ್ಲಿ ಚರ್ಚೆ

ಹಿಜಾಬ್ ಧರಿಸಿರುವ ಉಡುಪಿ ಕಾಲೇಜು ವಿದ್ಯಾರ್ಥಿನಿಯರು (ಸಂಗ್ರಹ ಚಿತ್ರ)

ಉಡುಪಿ: ರಾಜ್ಯಾದ್ಯಂತ ಇಂದಿನಿಂದ (ಏ್ರಪ್ರಿಲ್ 22) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ವಿವಾದದ ಕೇಂದ್ರವಾಗಿದ್ದ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನತ್ತ ಎಲ್ಲರ ಗಮನ ನೆಟ್ಟಿದೆ. ವಿದ್ಯಾರ್ಥಿನಿಯರು ಬುರ್ಖಾ ತೊಟ್ಟು ಕಾಲೇಜಿಗೆ ಬರುತ್ತಿದ್ದಾರೆ. ಹಿಜಾಬ್, ಬುರ್ಖಾ ತೆಗೆದಿಡಲು ಕಾಲೇಜು ಆಡಳಿತ ಮಂಡಳಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದೆ. ಉಡುಪಿ ನಗರ ಠಾಣಾ ಪೊಲೀಸರು ಪಿಯು ಕಾಲೇಜಿಗೆ ಸಿಬ್ಬಂದಿಯನ್ನು ನಿಯೋಜಿಸಿದ್ದು, ಪ್ರಾಂಶುಪಾಲರ ಜೊತೆ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು. ವಿದ್ಯೋದಯ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಹೋರಾಟಗಾರ್ತಿ ರೇಷಂ ಆಗಮಿಸಿದರು. ಇತರ ವಿದ್ಯಾರ್ಥಿನಿಯರಂತೆ ಪರೀಕ್ಷೆ ಬರೆಯಲು ಕಾಲೇಜು ಒಳಗೆ ಹೋದರು. ಹಿಜಾಬ್ ಹೋರಾಟದ ಮುಂಚೂಣಿಯಲ್ಲಿದ್ದ ಆಲಿಯಾ ಅಸಾದಿ ಸಹ ಹಾಲ್​ ಟಿಕೆಟ್ ಪಡೆದುಕೊಂಡರು. ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಕೋರಿ, ನ್ಯಾಯಾಲಯದ ಮೆಟ್ಟಿಲು ಹತ್ತಿದ್ದ ಆರು ವಿದ್ಯಾರ್ಥಿನಿಯರ ಪೈಕಿ ಇಬ್ಬರಿಗೆ ಇಂದು ಪರೀಕ್ಷೆ ಇತ್ತು. ಇವರಿಬ್ಬರೂ ಹಾಲ್ ಟಿಕೆಟ್ ಪಡೆದು, ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದಾರೆ. ಪರೀಕ್ಷೆ ಆರಂಭವಾಗುವ ಮೊದಲು ರಾಜ್ಯ ಸರ್ಕಾರದ ಸುತ್ತೋಲೆಯನ್ನು ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಗೋಡೆಗೆ ಅಂಟಿಸಿದರು. ಈ ಸಂಬಂಧ ಒಟ್ಟು 11 ಅಂಶಗಳಿರುವ ಸುತ್ತೋಲೆಯನ್ನು ಸರ್ಕಾರ ಪ್ರಕಟಿಸಿತ್ತು.

ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಎಂದು ವಿದ್ಯಾರ್ಥಿನಿಯರಾದ ಆಲಿಯಾ ಅಸ್ಸಾದಿ ಮತ್ತು ರೇಷಂ ಮನವಿ ಮಾಡಿದರು. ಪರೀಕ್ಷೆ ಆರಂಭವಾದರೂ ಇವರಿಬ್ಬರೂ ಪ್ರಾಚಾರ್ಯರ ಕಚೇರಿಯಲ್ಲಿಯೇ ಕುಳಿತಿದ್ದು ಚರ್ಚೆ ಮಾಡುತ್ತಿದ್ದಾರೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

TV9 Kannada


Leave a Reply

Your email address will not be published.