ಹಿರಿಯ ನಟ, ಕಲಾತಪಸ್ವಿ ರಾಜೇಶ್ ಇನ್ನಿಲ್ಲ


ಹಿರಿಯ ನಟ ರಾಜೇಶ್ (87) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ರಾಜೇಶ್ ಅವರು ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವರ ಕಟ್ಟಕಡೆಯ ಸಿನಿಮ. ಇವರ ಮೂಲ ಹೆಸರು ಮುನಿ ಚೌಡಪ್ಪ ಎಂದಾಗಿತ್ತು.

ವಿದ್ಯಾ ಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ರಾಜೇಶ್​ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ನಂತರ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದರು. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಅಂಬರೀಶ್ ಜೊತೆ ನಟಿಸಿರುವ ಖ್ಯಾತಿ ರಾಜೇಶ್​ಗೆ ಇತ್ತು. ನಾಯಕ ನಟರಾಗಿಯೂ ರಾಜೇಶ್ ಹೆಸರು ಮಾಡಿದ್ದರು. ಅವರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಗೌರವ ಸಿಕ್ಕಿತ್ತು.

News First Live Kannada


Leave a Reply

Your email address will not be published. Required fields are marked *