ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು | Senior actor Shivaram health update: doctor explains reasons for his illness


ಕನ್ನಡದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಬೆಂಗಳೂರಿನ ಬ್ಯಾಂಕ್​ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. 84 ವರ್ಷದ ಶಿವರಾಂ ಅವರಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದ್ದು ಯಾಕೆ? ಸದ್ಯ ಅವರ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ವೈದ್ಯರು ವಿವರಿಸಿದ್ದಾರೆ. ‘ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಟೆರೆಸ್​ನಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲಿಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು. ಒಂದೂವರೆ ಗಂಟೆ ಬಳಿಕ ಅದು ತಿಳಿದುಬಂದಿದೆ. ಅವರ ಮಗ ಮತ್ತು ಮೊಮ್ಮಗಳು ಆಸ್ಪತ್ರೆಗೆ ಕರೆದುಕೊಂಡು ಬಂದರು. ಎಂಆರ್​ಐ ಸ್ಕ್ಯಾನ್​ ಮಾಡಿದಾಗ ತಲೆ ಒಳಗೆ ಪೆಟ್ಟು ಬಿದ್ದಿರುವುದು ತಿಳಿಯಿತು’ ಎಂದು ಡಾ. ಮೋಹನ್​ ಹೇಳಿದ್ದಾರೆ.

TV9 Kannada


Leave a Reply

Your email address will not be published. Required fields are marked *