ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ಕಲಾವಿದ ತಿಪಟೂರು ರಘು ಇಂದು ನಿಧನರಾಗಿದ್ದಾರೆ. 83 ವರ್ಷ ವಯಸ್ಸಿನ ರಘು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಉಸಿರಾಟದ ಸಮಸ್ಯೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ.

ನಾಗ ಕಾಳಭೈರವ, ಬೆಂಕಿ ಬಿರುಗಾಳಿ, ಬೆಟ್ಟದ ಹುಲಿವೀಣೆ ಸೇರಿದಂತೆ ಅನೇಕ ಚಿತ್ರಗಳಿಗೆ ರಘು ನಿರ್ದೇಶನ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ಹಲವು ಚಿತ್ರಗಳಲ್ಲಿ ತಿಪಟೂರು ರಘು ಬಣ್ಣ ಹಚ್ಚಿದ್ದರು.

The post ಹಿರಿಯ ನಿರ್ದೇಶಕ, ಕಲಾವಿದ ತಿಪಟೂರು ರಘು ನಿಧನ appeared first on News First Kannada.

Source: newsfirstlive.com

Source link