ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸಾಹಿತ್ಯ ಲೋಕದ ಅಚ್ಚಳಿಯದ ನಕ್ಷತ್ರವೊಂದು ಕಳಚಿ ಬಿದ್ದಿದೆ. ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕುಷ್ಟಗಿ ಅವರನ್ನ ಇತ್ತೀಚೆಗಷ್ಟೆ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸ್ತಂಗತರಾಗಿದ್ದಾರೆ. ಸಾಹಿತಿಗಳಾಗಿ, ಸಾಹಿತ್ಯ ಸಂಘಟಕರಾಗಿ ಕಲಬುರ್ಗಿಯ ಸಾಹಿತ್ಯ ಪ್ರಿಯರಿಗೆ ಸಾಹಿತ್ಯ, ಶೈಕ್ಷಣಿಕ ವಿಷಯಗಳನ್ನು ತಮ್ಮ ಚಟುವಟಿಕೆಗಳ ಮುಖಾಂತರ ಪರಿಚಯಿಸುತ್ತಿದ್ದರು.

ವಸಂತ ಕುಷ್ಟಗಿ ಅವರು ಹುಟ್ಟಿದ್ದು ಚಾಲುಕ್ಯರ ರಾಜಧಾನಿಯಾಗಿದ್ದ ಬಾದಾಮಿಯಲ್ಲಿ. ಯಾದಗಿರಿಯಲ್ಲಿ ಪ್ರಾರಂಭಿಕ ಶಿಕ್ಷಣ ಮುಗಿಸಿ, ಹೈದ್ರಾಬಾದ್​ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಮುಗಿಸಿದ್ದರು. ಹೀಗೆ ಸಾಹಿತ್ಯದ ವಾತಾವರಣದಲ್ಲೇ ಬೆಳೆದ ವಸಂತ ಕುಷ್ಟಗಿ ಅವರು ‘ನನ್ನ ಮನೆ ಹಾಲಕೆನೆ’ ಎಂಬ ಕವಿತೆಯನ್ನು ಐದನೇ ತರಗತಿಯಲ್ಲಿದ್ದಾಗಲೇ ಬರೆದಿದ್ದರು.

ತಮ್ಮ ಕವನ ಸಂಕಲನಗಳಾದ ಹೊಸಹೆಜ್ಜೆ, ಗಾಂಧಾರಿಯ ಕರುಣೆ, ದಿಬ್ಬಣದ ಹಾಡು, ಬೆತ್ತಲೆಯ ಬಾನು ಸೇರಿದಂತೆ ಹಲವು ಕವನ ಸಂಕಲವನ್ನ ರಚಿಸಿದ್ದರು.

The post ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ಇನ್ನಿಲ್ಲ; ಕಂಬನಿ ಮಿಡಿದ ಗಣ್ಯರು appeared first on News First Kannada.

Source: newsfirstlive.com

Source link