ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ(103) ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾಗಿತ್ತು. ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಪದೇ ಪದೇ ನಂಗೆ ವಯಸ್ಸಾಗಿದೆ. ಆಸ್ಪತ್ರೆಗೆ ಬರಲ್ಲ, ನನ್ನ ಬೆಡ್ ಯುವಕರಿಗೆ ಉಪಯೋಗವಾಗಲಿ ಅಂತ ದೊರೆಸ್ವಾಮಿ ಈ ಹಿಂದೆ ಹೇಳಿದ್ದರು. ಈ ವೇಳೆ ಜಯದೇವ ವೈದ್ಯ ಡಾ ಮಂಜುನಾಥ್ ಅವರು, ಬೆಡ್ ಕೊರತೆ ಇಲ್ಲ ಅಂತ ಮನವೊಲಿಸಿ ಮತ್ತೆ ಉಸಿರಾಟದ ತೊಂದರೆ ಬಂದಾಗ ಆಸ್ಪತ್ರೆಗೆ ದಾಖಲು ಮಾಡಿದ್ರು.

The post ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನ appeared first on Public TV.

Source: publictv.in

Source link