ಹುಟ್ಟು ಹಬ್ಬದ ಶುಭಾಶಯಗಳು ಮೈ ಲವ್: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಜಾಗ್ವರ್ ನಿಖಿಲ್ ಕುಮಾರ್ ಸ್ವಾಮಿ ಪ್ರೀತಿಯ ಪತ್ನಿ ರೇವತಿಯವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಿಖಿಲ್ ಕುಮಾರ್ ಸ್ವಾಮಿಯವರು ಪತ್ನಿ ರೇವತಿಗೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ.

ನಿಖಿಲ್ ಕುಮಾರಸ್ವಾಮಿಯವರು ತಮ್ಮ ಪತ್ನಿ ರೇವತಿ ಜೊತೆಗಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ನಿಖಿಲ್ ತಮ್ಮ ಮಡದಿ ಜೊತೆ ತುಗುಯ್ಯಲೆ ಮೇಲೆ ಒಟ್ಟಿಗೆ ಕುಳಿತುಕೊಂಡಿದ್ದು, ರೇವತಿಯವರು ತಮ್ಮ ಎರಡು ಕೈಗಳಿಗೆ ಮೆಹಂದಿ ಹಾಕಿಕೊಂಡು ಕುಳಿತುಕೊಂಡಿದ್ದಾರೆ. ಹ್ಯಾಪಿ ಹ್ಯಾಪಿ ಬರ್ತ್‍ಡೇ ಟೂ ಯು ಮೈ ಲವ್ (ನನ್ನ ಪ್ರೀತಿಗೆ ಹುಟ್ಟುಹಬ್ಬದ ಶುಭಾಶಯಗಳು) ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಫಾರ್ಮ್ ಹೌಸ್‍ನಲ್ಲಿ ಆಪ್ತ ಬಂಧುಗಳ ಸಮ್ಮುಖದಲ್ಲಿ 2021ರ ಏಪ್ರಿಲ್ 17ರಂದು ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವಿವಾಹ ನಂತರ ಪ್ರಣಯ ಪಕ್ಷಿಗಳಂತೆ ಇರುವ ಈ ಮುದ್ದಾದ ಜೋಡಿಗಳ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ.

ಇತ್ತೀಚೆಗಷ್ಟೇ ನಿಖಿಲ್‍ಕುಮಾರಸ್ವಾಮಿಯರು ಲಾಕ್‍ಡೌನ್ ವೇಳೆ ಸಂಕಷ್ಟದಲ್ಲಿದ್ದ ಅನೇಕ ಮಂದಿಗೆ ಸಹಾಯ ಮಾಡುತ್ತಿದ್ದಾರೆ. ಅದರಲ್ಲೂ ಕೆಲವು ದಿನಗಳ ಹಿಂದೆ ನಿಖಿಲ್ ಕುಮಾರಸ್ವಾಮಿಯವರು ರಾಮನಗರದಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಮಾಡುವ ಮೂಲಕ ಗಮನ ಸೆಳೆದಿದ್ದರು.

The post ಹುಟ್ಟು ಹಬ್ಬದ ಶುಭಾಶಯಗಳು ಮೈ ಲವ್: ನಿಖಿಲ್ ಕುಮಾರಸ್ವಾಮಿ appeared first on Public TV.

Source: publictv.in

Source link