ಬೆಳಗಾವಿ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಮಣವನ್ನಪ್ಪಿದ ಕರ್ನಾಟಕದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ ಅವರ ಪಾರ್ಥೀವ ಶರೀರ ಇನ್ನೇನು ಕೆಲವೇ ಕ್ಷಣಗಳಲ್ಲಿ ತವರಿಗೆ ಆಗಮಿಸಲಿದೆ.

ವೀರಯೋಧನ ಅಂತ್ಯಕ್ರಿಯೆಗೆ ಉಕ್ಕಲಿ ಗ್ರಾಮದಲ್ಲಿ ಸಕಲ ಸಿದ್ಧತೆ ನಡೆದಿದೆ. ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಹುತಾತ್ಮ ಯೋಧನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 1 ಗಂಟೆ ವೇಳೆಗೆ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

ಉಕ್ಕಲಿ ಗ್ರಾಮದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಅಘೋಷಿತ ಬಂದ್​​ ಮಾಡುವ ಮುಖೇನ ಗ್ರಾಮಸ್ಥರು ವೀರಪುತ್ರ ಕಾಶೀರಾಯ ಬೊಮ್ಮನಹಳ್ಳಿಗೆ ಗೌರವ ಸಲ್ಲಿಸಿದ್ದಾರೆ. ಅಂತ್ಯಕ್ರಿಯೆಗೆ ಜನಸಾಗರವೇ ಹರಿದು ಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹುತಾತ್ಮ ಯೋಧ ಕಾಶೀರಾಯ(35) ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು. ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ನಲ್ಲಿ (ಎಮ್ಈಜಿ) ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು.

The post ಹುತಾತ್ಮ ಯೋಧ ಕಾಶೀರಾಯ ಅವರ ಅಂತ್ಯಕ್ರಿಯೆಗೆ ಬೆಳಗಾವಿಯ ಸ್ವಗ್ರಾಮದಲ್ಲಿ ಸಕಲ ಸಿದ್ಧತೆ appeared first on News First Kannada.

Source: newsfirstlive.com

Source link