ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ದುರ್ಘಟನೆಯಲ್ಲಿ ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಕಾರು ಹುಬ್ಬಳ್ಳಿಯಿಂದ ಬೆಳಗಾವಿಗೆ ಹೋಗುತ್ತಿತ್ತು ಎಂದು ತಿಳಿದುಬಂದೆ.
ಸದ್ಯ ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.