ಹುಬ್ಬಳ್ಳಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು | Hubli Crime News Police Complaint registered against Man for Harassment on Girl


ಹುಬ್ಬಳ್ಳಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಪ್ರಿಯಕರನಿಂದಲೇ ಪ್ರಿಯತಮೆ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯನ್ನು ಪುಸಲಾಯಿಸಿ ಮನೆಯಿಂದ ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಒತ್ತಾಯಪೂರ್ವಕವಾಗಿ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ತಾಯಿಯ ದೂರಿನ ಮೇರೆಗೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ.

ಅಪ್ರಾಪ್ತೆಯನ್ನು ಪುಸಲಾಯಿಸಿ ಜನವರಿ 10 ರಂದು ಮಧ್ಯಾಹ್ನ ನೇಕಾರ ನಗರ ಸೇತುವೆ ಸಮೀಪ ಆಕೆಯನ್ನು ಕರೆಸಿಕೊಂಡಿದ್ದ. ಆಕೆ ವಿರೋಧ ವ್ಯಕ್ತಪಡಿಸಿದರೂ ಒತ್ತಾಯಪೂರ್ವಕವಾಗಿ ಅತ್ಯಾಚಾರ ಮಾಡಿದ್ದ. ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆಯ ತಾಯಿ ಆರೋಪ ಮಾಡಿದ್ದಾರೆ. ಇದೀಗ, ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.

ಉಡುಪಿ, ಕೊಪ್ಪಳದಲ್ಲಿ ಎಸಿಬಿ ದಾಳಿ; ಲಂಚ ಸ್ವೀಕಾರ ಆರೋಪದಲ್ಲಿ ಸರ್ಕಾರಿ ಅಧಿಕಾರಿಗಳು ಎಸಿಬಿ ಬಲೆಗೆ

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಗುರುಪ್ರಸಾದ್ ಬಳಿ 2.50 ಲಕ್ಷ ರೂ. ಪತ್ತೆ ಆಗಿದೆ. ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ವಶಕ್ಕೆ ಪಡೆಯಲಾಗಿದೆ. ವಾಣಿಜ್ಯ ಉದ್ದೇಶಕ್ಕೆ ಪರವಾನಗಿ ನೀಡಲು ಲಂಚಸ್ವೀಕಾರ ಆರೋಪ ಕೇಳಿಬಂದಿತ್ತು. ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

ಕೊಪ್ಪಳ: ಕಟ್ಟಡ ಪರವಾನಗಿ ನೀಡಲು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪದಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಡಿಒ, ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಒ ಶೇಖ್​​ಸಾಬ್, ಕಾರ್ಯದರ್ಶಿ ನೂರ್​ಉಲ್ಲಕ್ ಬಲೆಗೆ ಬಿದ್ದಿದ್ದಾರೆ. ವಿಜಯ್​​ ಕುಮಾರ್​ನಿಂದ ಲಂಚ ಸ್ವೀಕರಿಸುವಾಗ ಎಸಿಬಿ ದಾಳಿ ನಡೆಸಲಾಗಿದೆ. ಕೊಪ್ಪಳ ಎಸಿಬಿ ಎಸ್​ಪಿ ಶ್ರೀಹರಿಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಜಪ್ತಿ, ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಶಿವಮೊಗ್ಗ: ಗೋಂಧಿ ಚಟ್ಟನಹಳ್ಳಿಯ ಹಳೇ ರೈಸ್ ಮಿಲ್ ಬಳಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 195 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ. ಲಾರಿ ಚಾಲಕ ಇರ್ಫಾನ್ ಎಂಬಾತನನ್ನು​​ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಂತಾಮಣಿಯ ಖಾಸಗಿ ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಗೋವಿಂದರಾಜ್, ಅಮೀರ್ ಸಾಬ್, ಮನ್ಸೂರ್ ಬಂಧಿಸಲಾಗಿದೆ. 3 ಲಕ್ಷ ರೂಪಾಯಿ ಮೌಲ್ಯದ 8 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

TV9 Kannada


Leave a Reply

Your email address will not be published. Required fields are marked *