ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು | 7 police were suspended because sale of seized Ganja in Hubballi here is details

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು

ಸಾಂಕೇತಿಕ ಚಿತ್ರ

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ಸ್ಪೆಕ್ಟರ್ ಸೇರಿ ಏಳು ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಖಚಿತ ಮಾಹಿತಿ ಮೇರೆಗೆ ನವನಗರ ಠಾಣೆ ಪೊಲೀಸರು ಗಾಂಜಾ ಮಾರಾಟಗಾರನ್ನ ಸೆರೆಹಿಡಿದಿದ್ದರು. ಆದರೆ ನಂತರ ಕೇಸ್ ದಾಖಲಿಸದೇ ಹಣ ಪಡೆದು, ಆರೋಪಿಗಳ‌ನ್ನ ಬಿಟ್ಟು ಕಳುಹಿಸಿದ್ದರು.  ಜೊತೆಗೆ ಸೀಜ್ ಮಾಡಿದ್ದ ೧ ಕೆಜಿ ಗಾಂಜಾವನ್ನ ಪೊಲೀಸರೇ ಮಾರಾಟ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿತ್ತು. ಹೀಗಾಗಿ ಡಿಸಿಪಿ ನೈತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಅಂತಿಮವಾಗಿ ನವನಗರ ಠಾಣೆ ಇನ್ಸ್ಪೆಕ್ಟರ್ ವಿಶ್ವನಾಥ ಚೌಗಲೆ, ಎಎಸ್ಐ ವಿಕ್ರಮ ಪಾಟೀಲ್ ಸೇರಿದಂತೆ ಏಳು ಜನರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಚಳ್ಳಕೆರೆಯ ಕೂನಿಗರಹಳ್ಳಿ ಗ್ರಾಮದಲ್ಲಿ ಗಾಂಜಾ ಮಾರುತ್ತಿದ್ದ ಬಸಮ್ಮ ಬಂಧನ:
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೂನಿಗರಹಳ್ಳಿ ಗ್ರಾಮದಲ್ಲಿ ಗಾಂಜಾ ಮಾರುತ್ತಿದ್ದವರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಸಮ್ಮ ಎಂದು ಗುರುತಿಸಲಾಗಿದ್ದು, 6 ಗಾಂಜಾ ಗಿಡ, 1.5 ಕೆಜಿ ಗಾಂಜಾವನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆ ಉಪ ಅಧೀಕ್ಷಕ ಕೃಷ್ಣ ಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

TV9 Kannada

Leave a comment

Your email address will not be published. Required fields are marked *