ಮಂಗಳೂರು: ಕೊವೀಡ್​​ನಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರ ನಡೆಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮಗನೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿಯವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದರು.

ಇಂದು ಅವರ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ಪುಣಚದ ಮನೆಯಲ್ಲಿ ಕೊವೀಡ್ ನಿಯಾಮಾವಳಿಯಂತೆ ನಡೆಸಲಾಗುತ್ತಿತ್ತು. ಈ ಸಂದರ್ಭ ಅವರ ಪುತ್ರ ಶೈಲೇಶ್ ಅವರು ಭಾಗಿಯಾಗಿದ್ದರು. ಅಂತಿಮ ಸಂಸ್ಕಾರದ ಪ್ರಕ್ರಿಯೆಗಳು ನಡೆಯುತ್ತಿರುವಾಗಲೇ ಶೈಲೇಶ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು.

ಕೂಡಲೇ ಅವರು ಮನೆಯತ್ತ ಹೋಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿತಾಗದೇ ಶೈಲೇಶ್ ಮೃತಪಟ್ಟಿದ್ದಾರೆ.

ಒಂದೇ ದಿನ ತಂದೆ ಹಾಗು ಪುತ್ರನನ್ನು ಕಳೆದುಕೊಂಡ ಮನೆಯ ಇತರ ಸದಸ್ಯರು ಆಘಾತಕ್ಕೆ ಒಳಗಾಗಿದ್ದಾರೆ. ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತ ಶೈಲೇಶ್ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದೂ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಮೃತ ಶೈಲೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

The post ಹೃದಯ ವಿದ್ರಾವಕ ಘಟನೆ.. ಅಪ್ಪನ ಅಂತ್ಯಸಂಸ್ಕಾರದ ವೇಳೆ ಹೃದಯಾಘಾತದಿಂದ ಮಗ ಸಾವು appeared first on News First Kannada.

Source: newsfirstlive.com

Source link