ಉಡುಪಿ: ಪತಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ನೊಂದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

70 ವರ್ಷದ ಗಂಗಮ್ಮ ಆತ್ಮಹತ್ಯೆಗೆ ಶರಣಾದ ವೃದ್ಧೆ. ಚಿತ್ರದುರ್ಗ ಮೂಲದವರಾಗಿದ್ದ ಗಂಗಮ್ಮಗೆ ಇತ್ತೀಚಿಗಷ್ಟೇ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದಿದ್ದರು.

ಇತ್ತ ಅವರ ಪತಿಗೂ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಪತಿಯ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ನೊಂದುಕೊಂಡ ಗಂಗಮ್ಮ, 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಹೃದಯ ವಿದ್ರಾವಕ ಘಟನೆ: ಪತಿಗೆ ಕೊರೊನಾ.. ಮನನೊಂದು ಪತ್ನಿ ಆತ್ಮಹತ್ಯೆ appeared first on News First Kannada.

Source: newsfirstlive.com

Source link