ಬೆಂಗಳೂರು: ಮಾಜಿ ಸಿಎಂ ಹೆಚ್.​ಡಿ ಕುಮಾರಸ್ವಾಮಿಯವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಕೆ.ಸಿ ಸದಾನಂದ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ಚೆನ್ನರಾಯಪಟ್ಟಣದವರಾದ ಸದಾನಂದ್ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತ ಸಂಭವಿಸಿತ್ತು. ತಕ್ಷಣ ಅವರನ್ನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸದಾನಂದ್ ಹಲವು ವರ್ಷಗಳಿಂದ ಕುಮಾರಸ್ವಾಮಿ ಅವ್ರಿಗೆ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

The post ಹೆಚ್​ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಸದಾನಂದ್ ನಿಧನ appeared first on News First Kannada.

Source: newsfirstlive.com

Source link