‘ಹೆಡ್​ ಬುಷ್​’ ಚಿತ್ರಕ್ಕೆ ರಿಲೀಸ್ ದಿನಾಂಕ ಫಿಕ್ಸ್​; ಅಕ್ಟೋಬರ್ ತಿಂಗಳಲ್ಲಿ ಡಾನ್ ಜಯರಾಜ್ ಆಗಮನ | Actor Dhananjay Starrer Don MP Jayaraj Biopic Head Bush Movie To release on October 21st


1970ರ ಸಮಯದಲ್ಲಿ ಬೆಂಗಳೂರಿನ ಭೂಗತ ಜಗತ್ತು ಹೇಗಿತ್ತು ಎಂಬುದನ್ನು ಈ ಸಿನಿಮಾ ಮೂಲಕ ಶೂನ್ಯ ತೋರಿಸಲು ಹೊರಟಿದ್ದಾರೆ. ಈ ಚಿತ್ರಕ್ಕಾಗಿ ಅನೇಕ ಸೆಟ್​ಗಳನ್ನು ಹಾಕಲಾಗಿತ್ತು. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಭೂಗತ ಲೋಕದಲ್ಲಿ ​ಜಯರಾಜ್ (MP Jayaraj)​ ಡಾನ್ ಆಗಿ ಮೆರೆದಿದ್ದರು. ಅವರ ಕುರಿತು ಈಗ ‘ಹೆಡ್​ ಬುಷ್​’ ಸಿನಿಮಾ (Head Bush) ಸಿದ್ಧಗೊಂಡಿದೆ. ಡಾಲಿ ಧನಂಜಯ್ ಅವರು (Dhananjay) ಈ ಚಿತ್ರದಲ್ಲಿ ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಶೂಟಿಂಗ್ ಪೂರ್ಣಗೊಂಡ ಬೆನ್ನಲ್ಲೇ ಈ ಚಿತ್ರಕ್ಕೆ ಜಯರಾಜ್ ಕುಟುಂಬದ ಕಡೆಯಿಂದ ವಿರೋಧ ವ್ಯಕ್ತವಾಗಿತ್ತು. ಆ ವಿಚಾರ ಇನ್ನೂ ಬೂದಿ ಮುಚ್ಚಿದ ಕೆಂಡಂತಿದೆ. ಹೀಗಿರುವಾಗಲೇ ‘ಹೆಡ್​ ಬುಷ್​’ ಚಿತ್ರಕ್ಕೆ ರಿಲೀಸ್ ದಿನಾಂಕ ಫಿಕ್ಸ್ ಆಗಿದೆ. ಈ ಸಿನಿಮಾ ಅಕ್ಟೋಬರ್ 21ರಂದು ರಿಲೀಸ್ ಆಗುತ್ತಿರುವ ಬಗ್ಗೆ ಧನಂಜಯ ಅವರು ಮಾಹಿತಿ ನೀಡಿದ್ದಾರೆ.

ಎಂ.ಪಿ. ಜಯರಾಜ್ ಜೀವನಾಧಾರಿತ ಸಿನಿಮಾ ‘ಹೆಡ್​ ಬುಷ್’. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸಿದ್ದಾರೆ. 1970ರ ಸಮಯದಲ್ಲಿ ಬೆಂಗಳೂರಿನ ಭೂಗತ ಜಗತ್ತು ಹೇಗಿತ್ತು ಎಂಬುದನ್ನು ಈ ಸಿನಿಮಾ ಮೂಲಕ ಶೂನ್ಯ ತೋರಿಸಲು ಹೊರಟಿದ್ದಾರೆ. ಈ ಚಿತ್ರಕ್ಕಾಗಿ ಅನೇಕ ಸೆಟ್​ಗಳನ್ನು ಹಾಕಲಾಗಿತ್ತು. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಅಕ್ಟೋಬರ್ 24ಕ್ಕೆ ದೀಪಾವಳಿ ಹಬ್ಬ . ಈ ಹಿನ್ನೆಲೆಯಲ್ಲಿ ಸಿನಿಮಾ ಅಕ್ಟೋಬರ್ 21ರಂದು ರಿಲೀಸ್ ಆಗಲಿದೆ. ರಿಲೀಸ್ ದಿನಾಂಕದ ವಿಚಾರವನ್ನು ಧನಂಜಯ ಅವರು ಸೋಶಿಯಲ್ ಮೀಡಿಯಾದಲ್ಲಿ ಖಚಿತಪಡಿಸಿದ್ದಾರೆ. ಅವರಿಗೆ ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ.

ಫಿಲ್ಮ್​ ಮೇಕಿಂಗ್​​​ನಲ್ಲಿ ಎಂ.ಎಸ್.ಸಿ. ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಕೆಲಸ ಮಾಡಿದ ಅನುಭವ ಪಡೆದಿದ್ದಾರೆ. ಡಾಲಿ ಧನಂಜಯ ಜತೆಗೆ ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ, ಹಿರಿಯ ನಟ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಪರಭಾಷೆಯಲ್ಲಿ ಗುರುತಿಸಿಕೊಂಡಿರುವ ಪಾಯಲ್ ಅವರು ಈ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿದೆ. ಬಾದಲ್ ನಂಜುಂಡಸ್ವಾಮಿ ಚಿತ್ರಕ್ಕೆ ಕಲಾ ನಿರ್ದೇಶನ ಮಾಡಿದ್ದಾರೆ.

ಧನಂಜಯ​ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ‘ಡಾಲಿ’, ‘ತೋತಾಪುರಿ’, ‘ಮಾನ್ಸೂನ್​ ರಾಗ’, ‘ಬೈರಾಗಿ’, ‘ಪುಷ್ಪ 2’ ಮೊದಲಾದ ಸಿನಿಮಾಗಳಲ್ಲಿ ಧನಂಜಯ​ ನಟಿಸುತ್ತಿದ್ದಾರೆ. ಇತ್ತೀಚೆಗೆ ‘ತೋತಾಪುರಿ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಧನಂಜಯ ಅವರು ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

TV9 Kannada


Leave a Reply

Your email address will not be published.