ಹೈ ಕೋರ್ಟ್​ ಚಾಟಿ ಬೆನ್ನಲ್ಲೇ ಕಾಂಗ್ರೆಸ್​​​ ಪಾದಯಾತ್ರೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ


ಬೆಂಗಳೂರು; ನಮ್ಮ ನೀರು ನಮ್ಮ ಹಕ್ಕು ಎಂದು ಕರ್ನಾಟಕ ಕಾಂಗ್ರೆಸ್​ ನಡೆಸುತ್ತಿರುವ ಪಾದಯಾತ್ರೆಗೆ ರಾಜ್ಯ ಸರ್ಕಾರ ಬ್ರೇಕ್​ ಹಾಕಿದ್ದು, ತಕ್ಷಣವೇ ಪಾದಯಾತ್ರೆ ನಿಲ್ಲಿಸಲು ಸೂಚಿಸಿ ರಾಜ್ಯ ಸರ್ಕಾರ ಆದೇಶ ಜಾರಿ ಮಾಡಿದೆ.

ಕಾಂಗ್ರೆಸ್​ ಪಾದಯಾತ್ರೆ ಕುರಿತಂತೆ ಹೈ ಕೋರ್ಟ್  ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಪಾದಯಾತ್ರೆಗೆ ಬ್ರೇಕ್​ ಹಾಕಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸಬೇಕು, ಇಲ್ಲವಾದರೇ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಆದೇಶ ನೀಡಿದ್ದಾರೆ.

ಇಂದು ಮುಖ್ಯ ಕಾರ್ಯದರ್ಶಿಗಳು ತುರ್ತು ನಡೆಸಿದ ಬೆನ್ನಲ್ಲೇ ಪಾದಯಾತ್ರೆ ನಿರ್ಬಂಧಿಸಿ ಆದೇಶ ನೀಡಲಾಗಿದೆ. ರಾಮನಗರ ಜಿಲ್ಲಾಧಿಕಾರಿ ಹಾಗೂ ಎಸ್​​ಪಿ ಅವರಿಗೆ ಸೂಚನೆ ನೀಡಿ ಆದೇಶ ನೀಡಲಾಗಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *