‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ | KGF Chapter 2 makers Hombale Films announces new movie with Soorarai Pottru director Sudha Kongara


‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ

ಹೊಂಬಾಳೆ ಫಿಲ್ಮ್ಸ್​, ಸುಧಾ ಕೊಂಗರ

ದೇಶಾದ್ಯಂತ ಈಗ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಸಂಸ್ಥೆ ಬಗ್ಗೆ ಸಿನಿಪ್ರಿಯರು ಮಾತನಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾ ಮೂಲಕ ಈ ಸಂಸ್ಥೆಯ ಕೀರ್ತಿ ಉತ್ತುಂಗಕ್ಕೆ ಏರಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರ ಸಿನಿಮಾ ಸಾಹಸಕ್ಕೆ ಜನರು ಉಘೇ ಉಘೇ ಎಂದಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈಗ ಹೊಸ ಚಿತ್ರ ಅನೌನ್ಸ್​ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಬಾರಿ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಸಿನಿಮಾ ಮಾಡುವ ಅವಕಾಶ ಪಡೆದಿರುವುದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ!  ಮೂಲತಃ ಆಂಧ್ರ ಪ್ರದೇಶದವರಾದ ಸುಧಾ ಕೊಂಗರ ಅವರು ತಮಿಳು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಒಂದಕ್ಕಿಂತ ಒಂದು ಡಿಫರೆಂಟ್​ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸೂರ್ಯ ನಟನೆಯ ‘ಸೂರರೈ ಪೋಟ್ರು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ಈಗ ಸುಧಾ ಕೊಂಗರ ಮತ್ತು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಕೈ ಜೋಡಿಸಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.

ಸದ್ದು ಗದ್ದಲ ಇಲ್ಲದೇ ಈ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ಅಚ್ಚರಿ ಎಂದರೆ, ಈ ಬಾರಿ ಸತ್ಯ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮುಂದಾಗಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕೆಲವು ನೈಜ ಕಥೆಗಳನ್ನು ಹೇಳಲೇ ಬೇಕು. ಸುಧಾ ಕೊಂಗರ ಅವರ ಜೊತೆ ನಮ್ಮ ಹೊಸ ಸಿನಿಮಾ ಅನೌನ್ಸ್​ ಮಾಡಲು ಹೆಮ್ಮೆ ಆಗುತ್ತಿದೆ’ ಎಂದು ಪೋಸ್ಟ್​ ಮಾಡಲಾಗಿದೆ.

TV9 Kannada


Leave a Reply

Your email address will not be published.