ಹೊನ್ನಾವರ ಪರಮೇಶ ಮೇಸ್ತ ಪ್ರಕರಣ: ಮೇಸ್ತಾ ಸಾವು ಹತ್ಯೆಯಲ್ಲ ಆಕಸ್ಮಿಕ ಸಾವು; ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ | Paresh mesta murder case: Mesta’s death was an accidental death, not murder cbi report


ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಹೊನ್ನಾವರ ಪರಮೇಶ ಮೇಸ್ತ ಪ್ರಕರಣ: ಮೇಸ್ತಾ ಸಾವು ಹತ್ಯೆಯಲ್ಲ ಆಕಸ್ಮಿಕ ಸಾವು; ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ

ಮೃತ ಪರಮೇಶ ಮೇಸ್ತಾ

ಉತ್ತರ ಕನ್ನಡ: ಹೊನ್ನಾವರ ಪರಮೇಶ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ ಸಾವು ಎಂದು ಉಲ್ಲೇಖಿಸಲಾಗಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16 ಕ್ಕೆ ತೀರ್ಪು ಕಾಯ್ದಿರಿಸಲಾಗಿದೆ.

ಘಟನೆ ಹಿನ್ನೆಲೆ

ಡಿಸೆಂಬರ್ 6 2017 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರಮೇಶ ಮೇಸ್ತ ಕಾಣೆಯಾಗಿದ್ದನು. ಮುಂದೆ ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೊಮು ಸಂಘರ್ಷಕ್ಕೆ ಕಾರಣವಾಗಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಪ್ರಕರಣದಲ್ಲಿ ಐದು ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ವಿಸೃತ ನಾಲ್ಕೂವರೆ ವರ್ಷ ತನಿಖೆ ನಡೆಸಿದ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.