ಕೋವಿಡ್‌ ಎರಡನೇ ಆತಂಕದಿಂದ ಈ ವರ್ಷವೂ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಏರುಪೇರಾಗುತ್ತಿದೆ. ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದರಿಂದ, ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್‌ಸಿ ಹಾಗೂ ಐಸಿಎಸ್‌ಸಿ 10ನೇ ತರಗತಿ ಬೋರ್ಡ್‌ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇನ್ನು ಕರ್ನಾಟಕ ರಾಜ್ಯ ಸರ್ಕಾರ ಕೂಡ ಒಂದರಿಂದ ಒಂಬತ್ತನೇ ತರಗತಿಯವರೆಗೆ ಎಲ್ಲ ಪರೀಕ್ಷೆಗಳನ್ನು ರದ್ದು ಮಾಡಿದೆ.

ಆದರೆ 10ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಇನ್ನೂ ರಾಜ್ಯ ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಕರ್ನಾಟಕ ಮಾತ್ರವಲ್ಲದೆ, ಪಕ್ಕದ ಆಂಧ್ರ ಸರ್ಕಾರ ಕೂಡ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ 10ನೇ ತರಗತಿ ಪರೀಕ್ಷೆ ನಡೆಯುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮುಂದುವರೆದಿರುವಂತೆಯೇ, ನಟಿ ಪ್ರಿಯಾಮಣಿ ಕರ್ನಾಟಕ ಹಾಗೂ ಆಂಧ್ರ ಪ್ರದೇಶದ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ರಚಿತಾ ರಾಮ್‌ ಈಗ ‘ಶಬರಿ’: ರಗಡ್‌ ಲುಕ್‌ನಲ್ಲಿ ಡಿಂಪಲ್‌ ಕ್ವೀನ್‌

ಈ ಬಗ್ಗೆ ತಮ್ಮ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಬರೆದು ಕೊಂಡಿರುವ ಪ್ರಿಯಾಮಣಿ, “ವಿದ್ಯಾರ್ಥಿಗಳೇ ನಮ್ಮ ಭವಿಷ್ಯ. ವಿದ್ಯಾರ್ಥಿಗಳ ಜೀವ ಎಲ್ಲದಕ್ಕಿಂತ ಮುಖ್ಯವೆ ಹೊರತು ಪರೀಕ್ಷೆ ಅಲ್ಲ. ಪರೀಕ್ಷೆಗಳನ್ನು ತಡ ಮಾಡಬಹುದು. ಆದರೆ, ವಿದ್ಯಾರ್ಥಿಗಳ ಜೀವ ಉಳಿಸುವುದು ತಡ ಮಾಡಲಾಗದು. ಕೊರೊನಾ ಎರಡನೇ ಅಲೆ ದೇಶದ ಎಲ್ಲ ಕಡೆ ಎದ್ದಿರುವ ಈ ಸಮಯದಲ್ಲಿ ದಯವಿಟ್ಟು ಪರೀಕ್ಷೆಗಳನ್ನು ರದ್ದು ಮಾಡಿ. ವಿದ್ಯಾರ್ಥಿಗಳು ಸುರಕ್ಷಿತವಾಗಿರಲಿ’ ಎಂದಿದ್ದಾರೆ.

ಇನ್ನು ವಿದ್ಯಾರ್ಥಿಗಳ ಪರವಾಗಿ ಧ್ವನಿಯೆತ್ತಿರುವ ಪ್ರಿಯಾಮಣಿಗೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ವಿದ್ಯಾರ್ಥಿಗಳು, ಪೋಷಕರು ಪ್ರಿಯಾಮಣಿ ಮಾತಿಗೆ ಸೈ ಎನ್ನುತ್ತಿದ್ದಾರೆ.

ಸಿನೆಮಾ – Udayavani – ಉದಯವಾಣಿ
Read More