10 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ದಂಪತಿ ಆತ್ಮಹತ್ಯೆ


ಕೊಡಗು: ಪತಿ-ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ನಡೆದಿದೆ. ಪತಿ ಯುವರಾಜ್ (25), ಪತ್ನಿ ಶಿಲ್ಪಾ (22) ಆತ್ಮಹತ್ಯೆ ಮಾಡಿಕೊಂಡವರು.

ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿದ್ದ ಯುವರಾಜ್, ಹತ್ತು ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ. ಬಿರುನಾಣಿಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಕೆಲವು ವರದಿಗಳ ಪ್ರಕಾರ ಮೊದಲು ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ನಿ ಶಿಲ್ಪಾಳ ಶವ ನೋಡಿ ಪತಿ ಯುವರಾಜ್ ಕೂಡ ಆತ್ಮಹತ್ಯೆ ಮಾಡ್ಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News First Live Kannada


Leave a Reply

Your email address will not be published. Required fields are marked *