ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ದೇಶದ 10 ರಾಜ್ಯದ 56 ಜಿಲ್ಲಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೊದಲ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 9 ರಾಜ್ಯಗಳ ಸಿಎಂ ಮತ್ತು ಜಿಲ್ಲಾಧಿಕಾರಿಗಳ ಜೊತೆ ಮೋದಿ ವರ್ಚುವಲ್ ಸಭೆ ನಡೆಸಿದ್ದರು.. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದರು. ಇಂದಿನ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಸಹ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರೋ ಹಿನ್ನೆಲೆ ಗ್ರಾಮೀಣ ಭಾಗದಲ್ಲಿನ ಕೊರೊನಾ ಪರಿಸ್ಥಿತಿ ನಿರ್ವಹಣೆ ಮತ್ತು ಅದಕ್ಕೆ ಬೇಕಾದ ಸಿದ್ದತೆಗಳ ಬಗ್ಗೆ ಈ ವೇಳೆ ಮೋದಿ ಹಾಗೂ ಅಮಿತ್ ಶಾ ಮಾಹಿತಿ ಪಡೆಯಲಿದ್ದಾರೆ.

The post 10 ರಾಜ್ಯಗಳ 56 ಜಿಲ್ಲಾಧಿಕಾರಿಗಳ ಜೊತೆ ಇಂದು ಪ್ರಧಾನಿ ಮೋದಿ, ಅಮಿತ್ ಶಾ ಸಭೆ appeared first on News First Kannada.

Source: newsfirstlive.com

Source link