10-12 ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ: ರಾಜೀವ್ ಚಂದ್ರಶೇಖರ್ – Grievance Appellate Committee contours in 10-12 days; panel to be in place by Nov 30: Rajeev Chandrasekhar


ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಮೇಲ್ಮನವಿ ವಿಚಾರಣೆಗೆ ಮುಂದಿನ 10ರಿಂದ 12 ದಿನಗಳ ಒಳಗಾಗಿ ‘ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ’ ರಚಿಸಲಾಗುವುದು ಎಂದು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಮಂಗಳವಾರ ತಿಳಿಸಿದ್ದಾರೆ.

10-12 ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ: ರಾಜೀವ್ ಚಂದ್ರಶೇಖರ್

ರಾಜೀವ್ ಚಂದ್ರಶೇಖರ್

Image Credit source: PTI

ನವದೆಹಲಿ: ಸಾಮಾಜಿಕ ಮಾಧ್ಯಮ (Social Media) ವೇದಿಕೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಮೇಲ್ಮನವಿ ವಿಚಾರಣೆಗೆ ಮುಂದಿನ 10ರಿಂದ 12 ದಿನಗಳ ಒಳಗಾಗಿ ‘ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ’ ರಚಿಸಲಾಗುವುದು. ಈ ಸಮಿತಿಯು ನವೆಂಬರ್ 30ರ ವೇಳೆಗೆ ಕಾರ್ಯಾಚರಣೆ ಆರಂಭಿಸಬಹುದು ಎಂದು ಐಟಿ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಮಂಗಳವಾರ ತಿಳಿಸಿದ್ದಾರೆ.

ಐಟಿ ನಿಯಮಗಳು ಮತ್ತು ಕಾನೂನುಗಳನ್ನು ಕೇವಲ ಆಯ್ಕೆಯಾಗಿ ಪರಿಗಣಿಸುವಂತಿಲ್ಲ. ಕಡ್ಡಾಯವಾಗಿ ಎಲ್ಲ ಸಾಮಾಜಿಕ ಮಾಧ್ಯಮ ವೇದಿಕೆಗಳು ಪಾಲಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಬಂಡವಾಳ ಹೂಡಿಕೆದಾರರ ಜತೆ ಸಮಾಲೋಚನೆ ನಡೆಸಿದ ಬಳಿಕವೇ ಸರ್ಕಾರ ಮೇಲ್ಮನವಿ ಸಮಿತಿ ರಚಿಸುವ ನಿರ್ಧಾರಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

10, 12 ದಿನಗಳ ಒಳಗಾಗಿ ಸಮಿತಿ ರಚಿಸಲಾಗುವುದು. ಗ್ರಾಹಕರು ಮತ್ತು ಉದ್ದಿಮೆಗಳ ಜತೆ ಸಮಾಲೋಚನೆ ನಡೆಸದೆ ಯಾವುದನ್ನೂ ಅಂತಿಮಗೊಳಿಸುವುದಿಲ್ಲ ಮತ್ತು ಅಧಿಸೂಚನೆ ಹೊರಡಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

TV9 Kannada


Leave a Reply

Your email address will not be published.