ಬೆಂಗಳೂರು:  ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ನಾಳೆಯಿಂದ ರಾಜ್ಯದಲ್ಲಿ ಸಂಪೂರ್ಣ​  ಲಾಕ್​ಡೌನ್ ಜಾರಿಯಾಗಲಿದೆ. ಈ ಹಿನ್ನೆಲೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಪತ್ರ ಬರೆದಿದ್ದು, ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ವ್ಯಕ್ತವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ನೇರವಾಗುವಂತೆ ಪತ್ರದಲ್ಲಿ ಸಿದ್ದರಾಮಯ್ಯ ಬಿಎಸ್​ವೈಗೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ನೀಡಿರುವ ಸಲಹೆಗಳು

 1. ಜಿಲ್ಲಾವಾರು ಆಕ್ಸಿಜನ್ ಘಟಕಗಳ ಸ್ಥಾಪನೆ ಮಾಡಬೇಕು
 2. ಆಕ್ಸಿಜನ್ ಲಭ್ಯತೆ ಆಧಾರದ ಮೇಲೆ ಕೋವಿಡ್ ಆಸ್ಪತ್ರೆ ಸ್ಥಾಪನೆ ಮಾಡಿ
 3. ಏಳೆಂಟು ಜಿಲ್ಲೆಗಳ ರೋಗಿಗಳನ್ನು ಒಂದು ಕಡೆ ಸೇರಿಸಿ, ಆಕ್ಸಿಜನ್ ನೀಡಬೇಕು
 4. ಲಸಿಕೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ, ಅದಕ್ಕೆ ಬ್ರೇಕ್ ಹಾಕಿ.
 5. ಐಸಿಯು, ವೆಂಟಿಲೇಟರ್, ಆಕ್ಸಿಜನ್ ಬೆಡ್ ಸ್ಫಾಪಿಸಲು ಏನು ಸಮಸ್ಯೆ? ಬೆಡ್ ಎಷ್ಟು ಬೇಕಾಗಬಹುದೆಂದು ಮೊದಲೇ ಅಂದಾಜಿಸಿ
 6. ಆದ್ಯತೆ ಮೇರೆಗೆ ಲಸಿಕೆ ಹಾಕಿ
 7. ವೆಂಟಿಲೇಟರ್​ಳನ್ನು ಗೋಡೌನುಗಳಲ್ಲಿ ಇಡಲಾಗಿದೆ ಎಂಬ ಮಾಹಿತಿ ಇದೆ, ಇದನ್ನು ಕ್ರಿಮಿನಲ್ ವರ್ತನೆ ಎನ್ನಬೇಕಾಗುತ್ತದೆ.
 8. ಕಲ್ಯಾಣ ಮಂಟಪ, ಕ್ರೀಡಾಂಗಣ, ಹಾಸ್ಟೆಲ್​​ಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ಮಾಡಿ ಚಿಕಿತ್ಸೆ ನೀಡಿ
 9. ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಬೇಳೆ, ಅಡುಗೆ ಎಣ್ಣೆ, ಮುಂತಾದ ದಿನಸಿ ಪದಾರ್ಥಗಳುಳ್ಳ ಕಿಟ್​ಗಳನ್ನು ನೀಡಬೇಕು
 10. ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂಪಾಯಿ ನೀಡಬೇಕು, ತಿಂಗಳಿಗೆ 6,000 ರೂಪಾಯಿಗಳನ್ನು ನೀಡಬೇಕು.
 11. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಡ್ರೈವರ್​ಗಳಾದಿಯಾಗಿ ಎಲ್ಲ ದುಡಿಯುವ ವರ್ಗಗಳಿಗೆ 10,000 ರೂಪಾಯಿಗಳನ್ನು ನೀಡಬೇಕು.
 12. ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜ್ ನೀಡಬೇಕು

 

The post 10 Kg ಅಕ್ಕಿ, BPL ಕುಟುಂಬಕ್ಕೆ ತಿಂಗಳಿಗೆ ₹6,000 ನೀಡ್ಬೇಕು- ಬಿಎಸ್​ವೈಗೆ ಸಿದ್ದರಾಮಯ್ಯರಿಂದ 12 ಸಲಹೆ appeared first on News First Kannada.

Source: newsfirstlive.com

Source link