ಬೆಳಗಾವಿ: ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದ್ದು ಜಿಲ್ಲೆಯ ಪೆಟ್ರೋಲ್ ಬಂಕ್​ನಲ್ಲಿ ಗ್ರಾಹಕರಿಗೆ ತಾವೇ ಪೆಟ್ರೋಲ್ ಹಾಕುವ ಮೂಲಕ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಬೆಳಗಾವಿಯ ಹಿಂಡಲಗಾ ಪೆಟ್ರೋಲ್ ಬಂಕ್​ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದ ಬೈಕ್ ಸವಾರನಿಗೆ ಪೆಟ್ರೋಲ್ ಹಾಕಿದ ಲಕ್ಷ್ಮೀ ಹೆಬ್ಬಾಳ್ಕರ್. ಪೆಟ್ರೋಲ್ ದರ ₹100 ರೂಪಾಯಿಗೆ ಏರಿಕೆಯಾಗಿರುವ ಹಿನ್ನೆಲೆ ಸವಾರನ ಬಳಿ ಅಭಿಪ್ರಾಯವನ್ನೂ ಕೇಳಿದ್ದಾರೆ.

ಎರಡು ಲೀಟರ್ ಪೆಟ್ರೋಲ್ ಹಾಕಿಸಿಕೊಂಡ ಬೈಕ್ ಸವಾರ ₹ 200 ನೀಡಿ ಅಲ್ಲಿಂದ ವಾಪಸ್ಸಾಗಿದ್ದಾನೆ. ಇನ್ನು ಈ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸರ್ಕಾರದಲ್ಲಿ ಶಾಸಕರೂ ಪೆಟ್ರೋಲ್ ಹಾಕುವ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದಾರೆ.

The post 100 ನಾಟ್​ಔಟ್: ಬೈಕ್ ಸವಾರನಿಗೆ ತಾವೇ ಪೆಟ್ರೋಲ್ ಹಾಕಿದ ಲಕ್ಷ್ಮೀ ಹೆಬ್ಬಾಳ್ಕರ್ appeared first on News First Kannada.

Source: newsfirstlive.com

Source link