ನವದೆಹಲಿ: ಕೊರೊನಾದ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 12ನೇ ತರಗತಿಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿದಾರರ ಪರ ವಕೀಲ ಮಮತಾ ಶರ್ಮಾ, ಮುಗ್ಧ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಅಮಾನವೀಯ ನಿರ್ದೇಶನಗಳನ್ನು ನೀಡಲಾಗಿದೆ. ಕಳೆದ ವರ್ಷ ಅವರು ಅಂಗೀಕರಿಸಿದ ನಿರ್ದೇಶನಗಳನ್ನು ಅನುಸರಿಸುವ ಬದಲು ಅಂತಿಮ ಪರೀಕ್ಷೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಬೇಕು ಎಂದು ಕೋರಿದ್ದಾರೆ.

ಆನ್‌ಲೈನ್ ಅಥವಾ ಆಫ್‌ಲೈನ್ ಪರೀಕ್ಷೆಗಳು ಸಹ ಪ್ರಸ್ತುತ ಪರಿಸ್ಥಿತಿಯಲ್ಲಿ ಕಾರ್ಯಸಾಧ್ಯವಲ್ಲ ಎಂದು ಮಮತಾ ಶರ್ಮಾ ಹೇಳಿದ್ದಾರೆ

The post 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ appeared first on News First Kannada.

Source: newsfirstlive.com

Source link