ಬೆಂಗಳೂರು: ಕೊರೊನಾ ಲಾಕ್​ಡೌನ್​​ನಲ್ಲಿ ವಿಧಿಸಲಾಗಿರುವ ನಿರ್ಬಂಧಗಳಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಸಡಿಲಿಕೆ ಮಾಡಿದೆ.

ಪಾಸಿಟಿವಿಟಿ ರೇಟ್​ನಲ್ಲಿ ಶೇಕಡಾ 5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಎಸಿ ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳನ್ನ ಓಪನ್ ಮಾಡಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಮದ್ಯಪಾನ ಮಾಡುವಂತಿಲ್ಲ. ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ: 16 ಜಿಲ್ಲೆಗಳ ಲಾಕ್​ಡೌನ್​ನಲ್ಲಿ ಮತ್ತಷ್ಟು ರಿಲೀಫ್.. ಯಾವ ಜಿಲ್ಲೆಗಳಿಗೆ ಅನ್ವಯ..?

ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ. ಜೊತೆಗೆ ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್​ಗಳಲ್ಲಿ ಶೇಕಡಾ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

The post 16 ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅನುಮತಿ.. ಬೆಂಗಳೂರಲ್ಲಿ ಓಡುತ್ತೆ ಮೆಟ್ರೋ.. ಆದ್ರೆ..  appeared first on News First Kannada.

Source: newsfirstlive.com

Source link