ಬೆಂಗಳೂರು: ಇಂದಿನಿಂದ ದೇಶಾದ್ಯಂತ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಆರಂಭವಾಗಿದೆ. ಶಿವಾಜಿನಗರದಲ್ಲಿರೋ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವ್ಯಾಕ್ಸಿನೇಷನ್​​ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಈ ವೇಳೆ ಸಂಸದ ಪಿ.ಸಿ ಮೋಹನ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಅಗತ್ಯ ಪ್ರಮಾಣದ ಲಸಿಕೆ ಡೋಸ್​​ಗಳು ಇನ್ನೂ ಬಂದಿಲ್ಲವಾದ್ದರಿಂದ ಇಂದು ಸಾಂಕೇತಿಕವಾಗಿ ಮಾತ್ರ ವ್ಯಾಕ್ಸಿನೇಷನ್​ಗೆ ಚಾಲನೆ ನೀಡಲಾಗಿದೆ. ಹೆಚ್ಚು ಡೋಸ್​ಗಳು ಬಂದ ನಂತರ 18 ವರ್ಷ ಮೇಲ್ಪಟ್ಟವರಿಗೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ವಿತರಣೆ ನಡೆಯಲಿದೆ.

ಕೊರೊನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಟ್ವೀಟ್ ಮುಖಾಂತರ ಯಡಿಯೂರಪ್ಪ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

The post 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಗೆ ಸಿಎಂ ಚಾಲನೆ appeared first on News First Kannada.

Source: newsfirstlive.com

Source link