ಮೊದಲನೇ ಟೆಸ್ಟ್ ಪಂದ್ಯದಲ್ಲಿ ಡ್ರಾಗೆ ತೃಪ್ತಿಪಟ್ಟುಕೊಂಡಿದ್ದವು ಭಾರತ ಹಾಗೂ ನ್ಯೂಜಿಲೆಂಡ್. ಈಗ ನಾಳೆಯಿಂದ ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.
ಮೊದಲನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಎರಡನೇ ಪಂದ್ಯಕ್ಕೆ ಮರಳಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಾರಾದರೂ ಒಬ್ಬರು ಕೊಹ್ಲಿಗೆ ತಮ್ಮ ಸ್ಥಾನವನ್ನು ಬಿಟ್ಟು ಕೊಡಬೇಕಾಗುತ್ತದೆ.
ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ಪೂಜಾರ ಇವರ ಪೈಕಿ ಒಬ್ಬರು ನಾಯಕ ವಿರಾಟ್ ಕೊಹ್ಲಿಗಾಗಿ ಸ್ಥಾನ ಬಿಟ್ಟುಕೊಡುವ ಸಾಧ್ಯತೆ ಇದೆ.