ಸಿಪಿಐ(ಎಂ)ನ ನಾಯಕ ಪಿಣರಾಯಿ ವಿಜಯನ್ ಇಂದು ಎರಡನೇ ಬಾರಿಗೆ ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಯುಡಿಎಫ್ ನಾಯಕರು ಈ ಕಾರ್ಯಕ್ರಮದಿಂದ ದೂರ ಉಳಿದರು. ಮಂಗಳವಾರ ಪಿಣರಾಯಿ ವಿಜಯನ್ ಅವರನ್ನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಇನ್ನು ಪಿಣರಾಯಿ ವಿಜಯನ್ ಜೊತೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಕಳೆದ ಬಾರಿಯ ಕೊರೊನಾ ಸಂದರ್ಭದಲ್ಲಿ ಒಳ್ಳೊಳ್ಳೆಯ ಕೆಲಸ ಮಾಡಿ ಜನಮೆಚ್ಚುಗೆ ಗಳಿಸಿದ್ದ ಕೆಕೆ ಶೈಲಜಾ ಸೇರಿದಂತೆ ಹಿಂದಿನ ಎಲ್ಲಾ ಸಚಿವರನ್ನೂ ಪಿಣರಾಯಿ ವಿಜಯನ್ ಕೈಬಿಟ್ಟು.. ನೂತನ ಶಾಸಕರನ್ನೇ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

The post 2ನೇ ಬಾರಿಗೆ ಕೇರಳದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ ವಿಜಯನ್ appeared first on News First Kannada.

Source: newsfirstlive.com

Source link