2ನೇ ಹಂತದ ಲಾಕ್​ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಿಎಂ ಸಭೆ

2ನೇ ಹಂತದ ಲಾಕ್​ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಿಎಂ ಸಭೆ

ಬೆಂಗಳೂರು: ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್​​ ರೇಟ್​ ಎರಡೂ ಕೂಡ ಇಳಿಕೆ ಕಂಡಿದೆ.

ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್​ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಸೋಮವಾರದಿಂದ ಜನರಿಗೆ ಮತ್ತಷ್ಟು ರಿಲೀಫ್ ನೀಡೋಕೆ ಮುಂದಾಗಿದೆ. ಅನ್ಲಾಕ್- 2 ರ ವಿಚಾರವಾಗಿ ಇಂದು ಸಂಜೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಯಾವ ಸೇವೆಗಳಿಗೆಲ್ಲ ವಿನಾಯತಿ ನೀಡಬಹುದೆಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

The post 2ನೇ ಹಂತದ ಲಾಕ್​ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಿಎಂ ಸಭೆ appeared first on News First Kannada.

Source: newsfirstlive.com

Source link