ಚಿಕ್ಕಮಗಳೂರು: ಇಂದು ಹಸೆಮಣೆ ಏರಬೇಕಿದ್ದ ಯುವಕ ಅನಾರೋಗ್ಯದಿಂದ ಮೃತಪಟ್ಟಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಪೃಥ್ವಿರಾಜ್ ಮೃತ ದುರ್ದೈವಿ.

ಪೃಥ್ವಿರಾಜ್ ಬೆಂಗಳೂರಿನಿಂದ ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದರು. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಲಂಗ್ಸ್​ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ಕಡೆಯಲ್ಲೂ ಕೊರೊನಾ ಟೆಸ್ಟ್​ ಮಾಡಿಸಿದಾಗ ವರದಿ ನೆಗೆಟಿವ್ ಬಂದಿತ್ತು ಎಂದು ಪೃಥ್ವಿರಾಜ್ ತಂದೆ ಮಂಜುನಾಥ್​ ತಿಳಿಸಿದ್ದಾರೆ.

ಇಂದು ಪೃಥ್ವಿರಾಜ್ ಅವರ ವಿವಾಹ ನಿಗದಿಯಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮದುವೆ ಸಂಭ್ರಮ ನೆಲೆಸಬೇಕಿದ್ದ ಮನೆಯಲ್ಲಿಗ ಸೂತಕದ ಛಾಯೆ ಆವರಿಸಿದೆ.

 

The post 2 ಟೆಸ್ಟ್​ನಲ್ಲೂ ಕೊರೊನಾ ನೆಗೆಟಿವ್: ಇಂದು ಮದುವೆಯಾಗಬೇಕಿದ್ದ ಯುವಕ ಸಾವು appeared first on News First Kannada.

Source: newsfirstlive.com

Source link