ಬೆಂಗಳೂರು: ರಾಜ್ಯದಲ್ಲಿ ಇಂದು 40,140 ಱಪಿಡ್ ಆ್ಯಂಟಿಜೆನ್ ಟೆಸ್ಟ್​ ಹಾಗೂ 1,17,932 ಆರ್​​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,58,072 ಕೊರೊನಾ ಟೆಸ್ಟ್​ಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು ರಾಜ್ಯದಲ್ಲಿ 3,310 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿಗೊಳಗಾದವರ ಸಂಖ್ಯೆ28,26,754ಕ್ಕೆ ಏರಿಕೆಯಾದಂತಾಗಿದೆ.

ಇಂದು 6,524 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 26,84,997 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಇಂದು 114 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ 34,539 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 1,07,195 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 614 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು 17 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡದಲ್ಲಿ 377, ಹಾಸನದಲ್ಲಿ 399, ಕೊಡಗು 183, ಕೋಲಾರ 140, ಮಂಡ್ಯ 119, ಮೈಸೂರು 367, ಶಿವಮೊಗ್ಗ ಜಿಲ್ಲೆಯಲ್ಲಿ 212 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

The post 2.09%ಗೆ ಇಳಿದ ಕೊರೊನಾ ಪಾಸಿಟಿವಿಟಿ ರೇಟ್; ಇಂದು 3,310 ಮಂದಿಗೆ ಸೋಂಕು appeared first on News First Kannada.

Source: newsfirstlive.com

Source link