20 ಅಂತಸ್ತಿನ ಬಹುಮಹಡಿ ಕಟ್ಟದಲ್ಲಿ ಬೆಂಕಿ ದುರಂತ- 7 ಮಂದಿ ಸಾವು


ಮುಂಬೈ: 20 ಅಂತಸ್ತಿನ ಬಹುಮಹಡಿ ಕಟ್ಟಡ ಬೆಂಕಿ ದುರಂತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈ ನಗರದಲ್ಲಿ ನಡೆದಿದ್ದು, ನಗರದ ಕಮಲಾ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ ಸಂಭವಿಸಿದೆ.

ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೂ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ 17 ಮಂದಿಯನ್ನು ರಕ್ಷಣೆ ಮಾಡಿ, ಸ್ಥಳೀಯ ಭಾಟಿಯಾ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸ್ಥಳಿಯ ಶಾಸಕ ಮಂಗಲ್ ಲೋಧಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಹುಮಹಡಿ ಕಟ್ಟಡದ 18ನೇ ಅಂತಸ್ತಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ 7:43ರ ಸಮಯದಲ್ಲಿ ಮೊದಲು ಬೆಂಕಿ ಬಿದ್ದಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಆಸ್ಪತ್ರೆಗೆ ದಾಖಲಾಗಿರುವ 6 ಮಂದಿ ಆಕ್ಸಿಜನ್​​ ಸಪೋರ್ಟ್​​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿಯನ್ನು ನಿಯಂತ್ರಣ ಮಾಡಲಾಗಿದ್ದು, ದಟ್ಟ ಹೊಗೆ ಅವರಿಸಿದ್ದ ಕಾರಣ ಕಾರ್ಯಾಚರಣೆ ತಡ ಮಾಡಿತ್ತು ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಾಹಿತಿ ನೀಡಿದ್ದರು.

News First Live Kannada


Leave a Reply

Your email address will not be published. Required fields are marked *