ನವದೆಹಲಿ: ಶ್ರೀ ಗುರುನಾನಕ್ ದೇವ್ ಜೀ ಅವರ ಪ್ರಕಾಶ್ ಪರ್ವ್ಗೂ ಮುನ್ನ ಕೇಂದ್ರ ಸರ್ಕಾರ ಕರ್ತಾರ್ಪುರ ಕಾರಿಡಾರ್ ಅನ್ನು ಪುನರಾರಂಭಿಸಿದೆ. ಇಂದಿನಿಂದ ಕರ್ತಾರ್ ಪುರ ಸಾಹಿಬ್ ಕಾರಿಡಾರ್ ತೆರೆಯಲಿದ್ದು, ಭಕ್ತರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಗುರುಪರ್ವ್ ನವೆಂಬರ್ 19 ರ ಶುಕ್ರವಾರದಂದು ಆರಂಭವಾಗಲಿದೆ. ಅದಕ್ಕೂ ಎರಡು ದಿನ ಮುಂಚಿತವಾಗಿಯೇ ಕರ್ತಾರ್ಪುರ್ ಕಾರಿಡಾರ್ನ್ನ ತೆರೆದಿರುವುದು ಭಕ್ತರಲ್ಲಿ ಸಂತಸ ಮೂಡಿಸಿದೆ. ಸದ್ಯ ಮೊದಲ ಬ್ಯಾಚ್ನಲ್ಲಿ 250 ಭಕ್ತರು ಕರ್ತಾರ್ಪುರ ಗುರುದ್ವಾರಕ್ಕೆ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಬಹುದಾಗಿದೆ.
ಭಾರತ ಮತ್ತು ಪಾಕಿಸ್ತಾನ ಎರಡೂ ಕಡೆಯಿಂದಲೂ ಓಪನ್ ಮಾಡಲಾಗಿದೆ. ಇನ್ನು ಇಲ್ಲಿಗೆ ಪ್ರವೇಶ ಮಾಡುವ ಭಕ್ತರಿಗೆ ಎರಡು ಡೋಸ್ ವ್ಯಾಕ್ಸಿನ್ ಆಗಿರಬೇಕು. ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ಇದೆ.