ಮೈಸೂರು: ಮೈಸೂರು ಮಹಾನಗರ ವ್ಯಾಪ್ತಿಯಲ್ಲಿ ಕೈಗೆಟುಕುವ ದರದಲ್ಲಿ ಮನೆ ಮುಂದೆಕ್ಕೆ ತೆರಳಿ ತಾಜಾ ಹಣ್ಣು, ತರಕಾರಿ ಮಾರಾಟ ಮಾಡುವ ಹಾಪ್ ಕಾಮ್ಸ್ ವಾಹನಗಳಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಚಾಲನೆ ನೀಡಿದರು.

ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಜೂ. 7ರವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ನಾಗರಿಕರಿಗೆ ಅಗತ್ಯವಿರುವ ತರಕಾರಿ,ಹಣ್ಣುಗಳ ಪೂರೈಕೆಯನ್ನು ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ರೈತರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಮನೆ ಮುಂದಗಡೆ ತಾಜಾ ಹಣ್ಣುಗಳು ಸಿಗುವಂತೆ ನೋಡಿಕೊಳ್ಳಲಾಗಿದೆ. ಇದರಿಂದಾಗಿ, ಯಾವುದೇ ಗ್ರಾಹಕರು ಹಣ್ಣು, ತರಕಾರಿಗಾಗಿ ಅಂಗಡಿಗಳ ಮುಂದೆ ಜಮಾಯಿಸಿ ಮುಗಿ ಬೀಳುವುದು ತಪ್ಪಿದಂತಾಗಿದೆ.

ಕೊರೊನಾ ಮೊದಲನೇ ಅಲೆಯಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರಪಾಲಿಕೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಮನೆ ಮನೆಗೆ ಹಣ್ಣು-ತರಕಾರಿಗಳನ್ನು ಪೂರೈಸುವ ವ್ಯವಸ್ಥೆ ಸಾಕಷ್ಟು ಅನುಕೂಲಕರವಾಗಿದೆ. ಇದನ್ನೂ ಓದಿ: ಜೂನ್ 7ರ ನಂತರ ಲಾಕ್ ಡೌನ್ ಬೇಡ:ಎಸ್.ಟಿ.ಸೋಮಶೇಖರ್

The post 20 ವಾಹನಗಳಲ್ಲಿ ಮನೆ ಬಾಗಿಲಿಗೆ ಬರಲಿದೆ 66 ಬಗೆ ಬಗೆಯ ಹಣ್ಣು,ತರಕಾರಿಗಳು appeared first on Public TV.

Source: publictv.in

Source link