
ಯಾಸಿನ್ ಮಲಿಕ್
2017 ರ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರತ್ಯೇಕತಾವಾದಿ ನಾಯಕ ಮೊಹಮ್ಮದ್ ಯಾಸಿನ್ ಮಲಿಕ್ ಮಂಗಳವಾರ ದೆಹಲಿ ನ್ಯಾಯಾಲಯದ ಮುಂದೆ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ. ಇದರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿರುವ ಆರೋಪಗಳು ಸೇರಿವೆ. ನ್ಯಾಯಾಲಯದ ಮೂಲಗಳ ಪ್ರಕಾರ, ಈಗ ನಿಷೇಧಕ್ಕೊಳಗಾಗಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ನ ಮುಖ್ಯಸ್ಥ ಮಲಿಕ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 16 (ಭಯೋತ್ಪಾದನಾ ಕಾಯ್ದೆ), 17 (ಭಯೋತ್ಪಾದನೆಗಾಗಿ ನಿಧಿ ಸಂಗ್ರಹಿಸುವುದು), 18 (ಭಯೋತ್ಪಾದಕ ಕೃತ್ಯ […]
2017 ರ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರತ್ಯೇಕತಾವಾದಿ ನಾಯಕ ಮೊಹಮ್ಮದ್ ಯಾಸಿನ್ ಮಲಿಕ್ ಮಂಗಳವಾರ ದೆಹಲಿ ನ್ಯಾಯಾಲಯದ ಮುಂದೆ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ. ಇದರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿರುವ ಆರೋಪಗಳು ಸೇರಿವೆ. ನ್ಯಾಯಾಲಯದ ಮೂಲಗಳ ಪ್ರಕಾರ, ಈಗ ನಿಷೇಧಕ್ಕೊಳಗಾಗಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ನ ಮುಖ್ಯಸ್ಥ ಮಲಿಕ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 16 (ಭಯೋತ್ಪಾದನಾ ಕಾಯ್ದೆ), 17 (ಭಯೋತ್ಪಾದನೆಗಾಗಿ ನಿಧಿ ಸಂಗ್ರಹಿಸುವುದು), 18 (ಭಯೋತ್ಪಾದಕ ಕೃತ್ಯ ಎಸಗಲು ಪಿತೂರಿ), ಮತ್ತು 20 (ಭಯೋತ್ಪಾದಕ ಗುಂಪು ಅಥವಾ ಸಂಘಟನೆಯ ಸದಸ್ಯ) ಯುಎಪಿಎ ಮತ್ತು ಸೆಕ್ಷನ್ 120-ಬಿ (ಅಪರಾಧದ ಪಿತೂರಿ) ಮತ್ತು 124-ಎ (ದೇಶದ್ರೋಹ) ಆರೋಪಗಳನ್ನು ಪ್ರಶ್ನಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)