ಆಸ್ಟ್ರೇಲಿಯಾದ ಕೋಚ್ ಟ್ರಾಯ್ ಕೂಲಿ ಸದ್ಯದಲ್ಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ವೇಗದ ಬೌಲಿಂಗ್ ಕೋಚ್ ಆಗಿ ನೇಮಕವಾಗಲಿದ್ದಾರೆ. ಇದಕ್ಕೆ ಈಗಾಗಲೇ ಬಿಸಿಸಿಐ ಸಿದ್ಧತೆ ನಡೆಸಿದೆ.

ವಿಶ್ವ ಕ್ರಿಕೆಟ್‌ನಲ್ಲಿ ಶ್ರೇಷ್ಠ ವೇಗದ ಬೌಲಿಂಗ್ ಕೋಚ್ ಟ್ರಾಯ್. ಇವರು 2005ರಲ್ಲಿ ಇಂಗ್ಲೆಂಡ್ ತಂಡದ ಕೋಚ್ ಆಗಿದ್ದರು. ಈಗ ಟ್ರಾಯ್ ಕೂಲಿ ಮನವೊಲಿಸಿ ಟೀಂ ಇಂಡಿಯಾ ಕೋಚ್ ಆಗಿ ಕರೆತರುವಲ್ಲಿ ಸೌರವ್ ಗಂಗೂಲಿ ಮತ್ತು ಜಯ್ ಶಾ ಯಶಸ್ವಿಯಾಗಿದ್ದಾರೆ.

ಟ್ರಾಯ್‌ ಜತೆ ಟೀಂ ಇಂಡಿಯಾ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಎನ್‌ಸಿಎಗೆ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಸಮನ್ವಯ ಸಾಧಿಸಿಕೊಂಡು ಟ್ರಾಯ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

News First Live Kannada