ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ. ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕೊಟ್ಟೂರು ಮಠದ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿ, ಹಾಲಕೆರೆಯ ಅನ್ನದಾನೇಶ್ವರ ಮಠದ ಡಾ. ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಯ

ಗದಗ: ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯ ಹಿನ್ನಲೆ, ಡಾ. ಸಂಗನಬಸವ ಸ್ವಾಮೀಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 8ಕ್ಕೆ ಹಾಲಕೆರೆ ಗ್ರಾಮದ ಮಠಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ. ಶ್ರೀಅನ್ನದಾನೇಶ್ವರ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಮಠಕ್ಕೆ ಎಸ್​ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಠದಲ್ಲಿ ಬಂದೋಬಸ್ತ್, ಮತ್ತಿತರೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಲಾಗಿದೆ. ನಾಳೆ (ನವೆಂಬರ್ 23) ಸಂಜೆ ಪೊಲೀಸ್​ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಇದನ್ನೂ ಓದಿ: ಕೊಟ್ಟೂರು ಮಠದ ಡಾ. ಸಂಗನ ಬಸವ ಮಹಾಸ್ವಾಮಿ, ಹಾಲಕೆರೆ ಅನ್ನದಾನೇಶ್ವರ ಮಠದ ಡಾ. ಅಭಿನವ ಸ್ವಾಮೀಜಿ ಲಿಂಗೈಕ್ಯ

ಇದನ್ನೂ ಓದಿ: ಪತ್ನಿಯೊಂದಿಗೆ ವಿಶ್ವ ಪರ್ಯಟನೆಗೆ ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ

TV9 Kannada