ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಈಗಿನ ಕೋಚ್ ರಾಹುಲ್ ದ್ರಾವಿಡ್ ನಡುವಿನ ವ್ಯತ್ಯಾಸವನ್ನು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಿಳಿಸಿದ್ದಾರೆ. ಈ ಸಂಬಂಧ ಮಾತಾಡಿದ ಇಬ್ಬರ ಕಾರ್ಯವೈಖರಿ ವ್ಯತ್ಯಾಸದ ಬಗ್ಗೆ ಹೇಳಿದ್ದಾರೆ.

ರವಿಶಾಸ್ತ್ರಿ ತಮ್ಮ ಅವಧಿಯಲ್ಲಿ ಟೀಂ ಇಂಡಿಯಾ ಯಶಸ್ಸಿಗ್ಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಶಾಸ್ತ್ರಿ ಕೋಚ್ ಆದ ವೇಳೆ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು ಎಂದರು.

ಇನ್ನು, ರಾಹುಲ್ ನೇಮಕವನ್ನು ಸ್ವಾಗತಿಸುತ್ತೇನೆ. ದ್ರಾವಿಡ್ ಹೇಳಿಕೆಗಳು ಯಾವಾಗಲೂ ಸಮತೋಲನದಿಂದ ಕೂಡಿರುತ್ತವೆ. ನಾವು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದೆವು. ಆಗ ನಮ್ಮ ತಂಡ ವಿಶ್ವದಲ್ಲೇ ಶ್ರೇಷ್ಠ ಎಂದು ಯಾರೊಬ್ಬರೂ ಹೇಳಿಕೆ ನೀಡಿರಲಿಲ್ಲ ಎಂದಿದ್ದಾರೆ.

News First Live Kannada