ಬೆಂಗಳೂರು: ಡಿಸೆಂಬರ್​ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಮೋದಿ ಭೇಟಿ ಹಿನ್ನೆಲೆಯಲ್ಲಿ ಇಂದು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಸಚಿವ ವಿ. ಸೋಮಣ್ಣ, ಕಾರ್ಯಕ್ರಮದ ಪೂರ್ವಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

News First Live Kannada