ಕಲಬುರಗಿ: ಅಕ್ರಮ ಆಸ್ತಿ ಗಳಿಸಿದ ಆರೋಪ; ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ದಾಳಿ

ಎಸಿಬಿ ಅಧಿಕಾರಿಗಳ ದಾಳಿ

ಕಲಬುರಗಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ (PWD) ಜೆ.ಇ. ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದಾರ್‌ ಅವರ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು, ಜೆ.ಇ. ಶಾಂತಗೌಡ ಬಿರಾದಾರ್‌ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು: ಎಸಿಬಿ ಅಧಿಕಾರಿಗಳ ದಾಳಿ; ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ರೇಡ್
ಬೆಂಗಳೂರಿನಲ್ಲಿ ಬೆಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿಗೆ ಮುಂದಾಗಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

Cricket Betting: ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: 5 ಲಕ್ಷ ರೂ. ವಶಕ್ಕೆ

ಅನರ್ಹ ವ್ಯಕ್ತಿಗೆ ಪರಿಹಾರ, ನಿವೇಶನಗಳ ಅಕ್ರಮ ಹಂಚಿಕೆ: ಬಿಡಿಎ ಕಚೇರಿಗಳ ಮೇಲೆ ಎಸಿಬಿ ದಾಳಿ ವೇಳೆ ಹಲವು ಅಕ್ರಮಗಳು ಬಯಲಿಗೆ

TV9 Kannada