ಕಲಬುರಗಿ: ಅಕ್ರಮವಾಗಿ ಆಸ್ತಿ ಸಂಪಾದನೆಯ ಆರೋಪ ಹೊತ್ತಿರುವ ಸರಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ. ಭ್ರಷ್ಟಚಾರ ಆರೋಪದ ಹಿನ್ನೆಲೆ ಅಧಿಕಾರಿಗಳು, ನಗರದ ಲೋಕೋಪಯೋಗಿ ಅಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಕಲಬುರಗಿಯ ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಗುಬ್ಬಿ ಕಾಲೋನಿಯಲ್ಲಿ ಮೂರಂತಸ್ತಿನ ಭವ್ಯ ಬಂಗಲೆಯಲ್ಲಿ ತಪಾಸಣೆಯಲ್ಲಿ ತೊಡಗಿರುವ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆಹಾಕಿದ್ದಾರೆ. ವಿವಿ ರಸ್ತೆಯಲ್ಲಿ ಎರಡು ನಿವೇಶನ, ತಾಲೂಕಿನ ಹಂಗರಗಾ ಗ್ರಾಮದಲ್ಲಿ 40 ಎಕರೆ ಜಮೀನು, ಬೆಂಗಳೂರಿನಲ್ಲೂ ಆಸ್ತಿ, ಹಂಗರಗಾ ಗ್ರಾಮದಲ್ಲಿ ಮೂರು ಮನೆಗಳು ಸೇರಿ ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

The post ಸರ್ಕಾರಿ ಕೆಲಸ; ಕುಬೇರನಿಗೂ ಲೋನ್​ ಕೊಡ್ತಾರಂತೆ ಈ PWD ಅಧಿಕಾರಿ; ಆಸ್ತಿ ಕಂಡು ACBಗೇ ಶಾಕ್ appeared first on News First Kannada.

News First Live Kannada