ನವದೆಹಲಿ: ದೇಶದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಕಾನೂನುಬದ್ಧ ಟೆಂಡರ್ ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಭಾರತದಲ್ಲಿ ಬಿಟ್​ಕಾಯಿನ್ ವಹಿವಾಟು ಸದ್ದಿಲ್ಲದೇ ಹೆಚ್ಚುತ್ತಿದೆ ಎಂದು ಲೋಕಸಭೆ ಕಲಾಪದಲ್ಲಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಲಿಖಿತ ರೂಪದಲ್ಲಿ ಉತ್ತರ ನೀಡಿರುವ ಕೇಂದ್ರ ಹಣಕಾಸು ಸಚಿವೆ, ಬಿಟ್​ಕಾಯಿನ್​​ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದಾರೆ.

ಚಳಿಗಾಲದ ಸಂಸತ್​ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಕ್ರಿಪ್ಟೋಕರೆನ್ಸಿ ಅಂಡ್ ರೆಗ್ಯೂಲೇಷನ್ ಆಫ್ ಆಫೀಷಲ್ ಡಿಜಿಟಲ್ ಕರೆನ್ಸಿ ಬಿಲ್​-2021 ಪ್ರಸ್ತಾಪ ಮಾಡಲಿದೆ. ಕೆಲವು ವಿನಾಯತಿಗಳನ್ನ ಹೊರತುಪಡಿಸಿ ಎಲ್ಲಾ ಪ್ರೈವೇಟ್ ಕ್ರಿಪ್ಟೋಕರೆನ್ಸಿಯನ್ನ ದೇಶದಲ್ಲಿ ಬ್ಯಾನ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.

News First Live Kannada