74th Republic Day Live Updates: ಇಂದು (ಜ.26) 74ನೇ ಗಣರಾಜ್ಯೋತ್ಸವ ಸಮಾರಂಭ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ.

ಗಣರಾಜ್ಯೋತ್ಸವ ಪರೇಡ್
Image Credit source: India.com
ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ (Republic Day of India) ಇಂದಿಗೆ 74 ವರ್ಷ ಪೂರೈಸಿದೆ. 1950 ಜನವರಿ 26ರಂದು ದೇಶ ಗಣತಂತ್ರವಾಯಿತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಳಗ್ಗೆ 10.30ಕ್ಕೆ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಗಣರಾಜ್ಯೋತ್ಸವ ಪರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್ ಸಿಸಿ ಆಗಮಿಸಿದ್ದಾರೆ.
ತಾಜಾ ಸುದ್ದಿ